ಮಂಗಳೂರು: ನಗರದ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರ ( ಮಾ.13 ರಂದು) ತಡರಾತ್ರಿ ಸಂಭವಿಸಿದೆ.
ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು ಬಿದ್ದಿದ್ದರಿಂದ 9 ಮಂದಿಗೆ ತರಚಿದ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಶೆಡ್ ತಳಭಾಗದ ಒಂದು ಬದಿಯಲ್ಲಿ ಮಣ್ಣು ಕುಸಿದಿದ್ದು ನಿದ್ದೆಯಲ್ಲಿದ್ದ ಕಾರ್ಮಿಕರು ಕೆಳಕ್ಕೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Bhopal Gas Tragedy;ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ-ಕೇಂದ್ರ ಮನವಿ ವಜಾಗೊಳಿಸಿದ ಸುಪ್ರೀಂ
Related Articles