ಕಾಪು: ಭಾರತವನ್ನು ಜಗತ್ತಿನಲ್ಲೇ ಬಲಶಾಲಿ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ನಿಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಾರ್ವಭೌಮತ್ವವನ್ನು ಎತ್ತಿ ಹಿಡಿದಿದ್ದಾರೆ. ಮಾತ್ರವಲ್ಲದೇ ಅಗ್ರಗಣ್ಯ ರಾಷ್ಟ್ರಗಳಲ್ಲಿ ಭಾರತವೂ ಒಂದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.
ಕಾಪು ಶ್ರೀ ವೀರಭಧ್ರ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾಪು ಕ್ಷೇತ್ರ ಬಿಜೆಪಿಯ 4ನೇ ಕ್ಷೇತ್ರ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದರು.
ಅಲ್ಪಸಂಖ್ಯಾಛಿರ ಓಲೆ„ಕೆಯ ರಾಜಕೀಯದಲ್ಲಿ ಮುಳುಗಿರುವ ಕಾಂಗ್ರೆಸ್ ಈಗ ಹಿಂದೂಗಳನ್ನು ವಿಭಜಿಸಿ ಅದರ ಮೂಲಕ ಲಾಭಗಳಿಸಲು ಯತ್ನ ಮಾಡುತ್ತಿದೆ. ನಮ್ಮ ರಕ್ಷಣೆಯನ್ನು ನಾವೇ ಮಾಡಬೇಕಾದ ಅನಿವಾರ್ಯತೆ ನಮ್ಮದಾಗಿದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನೇತƒತ್ವದಲ್ಲಿ ಕರ್ನಾಟಕ ನವ ನಿರ್ಮಾಣದ ರಥಯಾತ್ರೆ ಉಡುಪಿ ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಿಲ್ಲೆಗೆ ಆಹ್ವಾನಿಸುವ ಕುರಿತಾಗಿ ಸಮಾಲೋಚನೆ ನಡೆಸಲಾಗುತ್ತಿದೆ ಎಂದರು.
ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಉಡುಪಿ ಜಿ. ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾ ವಕ್ತಾರ ಕಟಪಾಡಿ ಶಂಕರ ಪೂಜಾರಿ, ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.
ಕಾಪು ಕ್ಷೇತ್ರ ಬಿಜೆಪಿ ಉಪಾಧ್ಯಕ್ಷ ಗುರುಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪುರಸಭಾ ಸದಸ್ಯೆ ರಮಾ ವೈ. ಶೆಟ್ಟಿ ವಂದೇ ಮಾತರಂ ಪಠಿಸಿದರು. ಎಂ. ಜಿ. ನಾಗೇಂದ್ರ ಮತ್ತು ಕಟಪಾಡಿ ಶಂಕರ ಪೂಜಾರಿ ನಿರ್ಣಯ ಮಂಡಿಸಿದರು. ಬಿಜೆಪಿ ಪ್ರ. ಕಾರ್ಯದರ್ಶಿಗಳಾದ ಜಿತೇಂದ್ರ ಶೆಟ್ಟಿ ವಂದಿಸಿದರು. ಕೆ. ಮುರಲೀಧರ ಪೈ ಕಾರ್ಯಕ್ರಮ ನಿರೂಪಿಸಿದರು.