Advertisement

ಮುಂಗಾರು ಕೈಕೊಟ್ಟರೆ ಮೋಡ ಬಿತ್ತನೆ

03:45 AM Jun 25, 2017 | Team Udayavani |

ಮೈಸೂರು: ಸತತವಾಗಿ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಈ ಬಾರಿಯೂ ಮುಂಗಾರು ಕೈಕೊಟ್ಟಿರುವ ಹಿನ್ನೆಲೆಯಲ್ಲಿ  ಮೋಡ ಬಿತ್ತನೆ ಮಾಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

Advertisement

ಜೂನ್‌ ತಿಂಗಳ ಆರಂಭದಲ್ಲಿ ಸಾಮಾನ್ಯವಾಗಿ ಮುಂಗಾರು ಆರಂಭವಾಗುವುದು ವಾಡಿಕೆ. ಆದರೆ, ಈ ವರ್ಷ ಜೂನ್‌ ತಿಂಗಳ ಅಂತ್ಯ ಸಮೀಪಿಸಿದರೂ ಮುಂಗಾರು ಮಳೆ ಉತ್ತಮವಾಗಿ ಆಗಿಲ್ಲ. ಮುಂಬರುವ ದಿನಗಳಲ್ಲಿ ಮಳೆ ಬರುವ ನಿರೀಕ್ಷೆ ಇದೆ. ಒಂದು ವೇಳೆ ಮಳೆ ಬರಲಿಲ್ಲ ಎಂದರೆ ಮೋಡ ಬಿತ್ತನೆ ಮಾಡಿಸಲು ಸರಕಾರ ನಿರ್ಧಾರ ಕೈಗೊಂಡಿದ್ದು, ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಶೀಘ್ರ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.

ಇದೇ ವೇಳೆ,  ಸಾಲ ಮನ್ನಾ ವಿಚಾರದಲ್ಲಿ ಯಾರಿಗೂ ತಾರ ತಮ್ಯ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸಾಲ ಮನ್ನಾ ಘೋಷಣೆ ಮಾಡಲಾದರೂ ಇನ್ನೂ ಅಧಿಕೃತ ಆದೇಶ ಬಿದ್ದಿಲ್ಲ. ಆದರೆ ಕರ್ನಾಟಕದಲ್ಲಿ ಮನ್ನಾ ಬಗ್ಗೆ ಘೋಷಣೆ ಮಾಡಿದ ಮಾರನೇ ದಿನವೇ ಅಧಿಕೃತ ಆದೇಶವನ್ನೂ ಹೊರಡಿಸಲಾಗಿದೆ. ಅವರು ಬಹು ಕಾಲದಿಂದ ಹಾಗೆಯೇ ಉಳಿದಿದ್ದ ಸಾಲ ಮನ್ನಾ ಮಾಡಿರಬಹುದು. ಆದರೆ ನಾವು 2017ರ ಜೂನ್‌ 20ರ ವರೆಗಿನ ಅಲ್ಪಾವಧಿ ಸಾಲ ಮನ್ನಾ ಮಾಡುವ ಮೂಲಕ ಎಲ್ಲರಿಗೆ ಉಪಯೋಗವಾಗುವಂತೆ ಮಾಡಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next