Advertisement

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

10:59 AM Jun 30, 2024 | Team Udayavani |

ಬೆಂಗಳೂರು: ನಗರದ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಮೊರೆ ಹೋಗಿರುವ ರಾಜ್ಯ ಸರ್ಕಾರ, ದೊಡ್ಡ ನೆರವಿನ ಪಟ್ಟಿಯನ್ನೇ ಮುಂದಿಟ್ಟಿದೆ.

Advertisement

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಡೀ ರಾಜ್ಯಕ್ಕೆ ಸಂಬಂಧಿಸಿದ 10 ಅಂಶಗಳ ಪಟ್ಟಿಯನ್ನು ಸಲ್ಲಿಸಿದ್ದು, ಅದರಲ್ಲಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ 5 ಬೇಡಿಕೆಗಳೂ ಇವೆ. ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ. ಸುರಂಗ ಮಾರ್ಗಕ್ಕೆ 3,000 ಕೋಟಿ ರೂ. ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗವು ರಾಷ್ಟ್ರೀಯ ಹೆದ್ದಾರಿ 7 ಮತ್ತು ರಾಷ್ಟ್ರೀಯ ಹೆದ್ದಾರಿ 4ರ ನಡುವೆ ಸಂಪರ್ಕ ಕಲ್ಪಿಸಲಿದೆ. ಹೀಗಾಗಿ ರಾಜ್ಯ ಸರ್ಕಾರವು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರದ ಸಹಯೋಗದೊಂದಿಗೆ ಕಾಮಗಾರಿ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್‌ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್‌ಎಚ್‌ಎಐಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಇದಲ್ಲದೆ, ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ನಿಗಮವು 44.65 ಕಿ.ಮೀ. ಉದ್ದದ 3ನೇ ಹಂತದ ಮೆಟ್ರೋ ರೈಲು ಯೋಜನೆಯನ್ನು 15,611 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ವಿಸ್ತೃತ ಯೋಜನಾ ವರದಿ (ಡಿಪಿಆರ್‌)ಯನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ. 73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್‌ ರಿಂಗ್‌ ರೋಡ್‌ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್‌ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಕೋರಿದ್ದು, 15 ನೇ ಹಣಕಾಸು ಆಯೋಗವು 2021-26 ರ ಅವ ಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೆರಿಫೆರಲ್‌ ರಿಂಗ್‌ ರೋಡ್‌ ಗಾಗಿ ಶಿಫಾರಸು ಮಾಡಿರುವ 6,000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ. ಬಿಬಿಎಂಪಿ ವತಿಯಿಂದ ಘನತ್ಯಾಜ್ಯ ನಿರ್ವಹಣೆಗಾಗಿ 3,200 ಕೋಟಿ ರೂ. ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30 ಅಂದರೆ 960 ಕೋಟಿ ರೂ.ಗಳನ್ನು ಸ್ವತ್ಛ ಭಾರತ ಅಭಿಯಾನ 2.0 ದಡಿ ಕಾರ್ಯಸಾಧ್ಯಾತಾ ಅಂತರ ನಿಧಿಒದಗಿಸಲು ಕೋರಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next