Advertisement
ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು, 1,440 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರ ಸ್ಥಾಪನೆಗೂ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಿದರು.
ತ್ಯಾಜ್ಯ ನೀರಿನ ಸಂಪೂರ್ಣ ಶುದ್ಧೀಕರಣ: ಬೆಂಗಳೂರಿನಲ್ಲಿರುವ ಕೆರೆಗಳ ರಕ್ಷಣೆ ಮತ್ತು ಸಂರಕ್ಷಣೆಗೆ ಕ್ರಮ ಕೈಗೊಂಡಿದ್ದು, ತ್ಯಾಜ್ಯ ನೀರಿನ ಶುದ್ಧೀಕರಣಕ್ಕೆ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ದಿನಕ್ಕೆ 84.6 ಕೋಟಿ ಲೀಟರ್ ತ್ಯಾಜ್ಯ ನೀರು ಶುದ್ಧೀಕರಿಸುತ್ತಿದ್ದು, 21.1 ಕೋಟಿ ಲೀ. ತ್ಯಾಜ್ಯ ನೀರು ಶುದ್ಧೀಕರಿಸುವ ಸಾಮರ್ಥ್ಯದ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಜತೆಗೆ 44
ಕೋಟಿ ಲೀ. ತ್ಯಾಜ್ಯ ನೀರು ಸಂಸ್ಕರಿಸುವ ಸಾಮರ್ಥ್ಯ ಹೊಂದಿರುವ ನಾಲ್ಕು ಘಟಕಗಳನ್ನು 1,203 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಯೋಜನೆ ರೂಪಿಸಲಾಗಿದ್ದು, 2020ರ ವೇಳೆಗೆ ಯೋಜನೆ ಪೂರ್ಣಗೊಳ್ಳಲಿದೆ. ಆಗ ನಗರದ ಶೇ.100ರಷ್ಟು ತ್ಯಾಜ್ಯ ನೀರು ಶುದ್ಧೀಕರಣಗೊಳ್ಳಲಿದೆ ಎಂದು ತಿಳಿಸಿದರು.