Advertisement

ಸಂಚಾರ ದಟ್ಟಣೆ ನಿರ್ವಹಣೆಗೆ ರಾಜ್ಯ ಸರ್ಕಾರ ವಿಫ‌ಲ

11:49 AM May 01, 2018 | |

ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಸಂಚಾರ ದಟ್ಟಣೆ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ ಎಂದು ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಡಾ.ಸಿ.ಎನ್‌.ಅಶ್ವತ್ಥ್ ನಾರಾಯಣ ಆರೋಪಿಸಿದ್ದಾರೆ.

Advertisement

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡಿ ಮತಯಾಚನೆ ಮಾಡಿದ ಅವರು ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತನಾಡಿ, ಬೆಂಗಳೂರು ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯಿಂದ ನಾಗರಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಬೆಳಗ್ಗೆ ಕಚೇರಿಗೆ ಹೋಗುವಾಗ ಹಾಗೂ ಸಂಜೆ ಮನೆಗೆ ಬರುವಾಗ ರಸ್ತೆಯಲ್ಲಿಯೇ ಗಂಟೆಗಟ್ಟಲೆ ಸಮಯ ವ್ಯಯವಾಗುತ್ತಿರುವುದರಿಂದ ಜನತೆ ಹೈರಾಣಾಗಿದ್ದಾರೆ ಎಂದು ದೂರಿದರು.

ಕಳೆದ ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆ ನಿವಾರಿಸಲು ಯಾವುದೇ ರೀತಿಯಲ್ಲಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳದೆ ಜವಾಬ್ದಾರಿಯಿಂದ ನುಣಚಿಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಬೆಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಹಾಗೂ ಕಾರು ಸಹಿತ 50 ಲಕ್ಷಕ್ಕೂ ಅಧಿಕ ವಾಹನಗಳಿವೆ. ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಸಮೂಹ ಸಾರಿಗೆ ಸೌಲಭ್ಯ ಕಲ್ಪಿಸದೆ ಇರುವುದರಿಂದ ಸಂಚಾರಿ ದಟ್ಟಣೆ ಸಮಸ್ಯೆ ಉಲ್ಬಣವಾಗಲು ಕಾರಣವಾಗಿದೆ ಎಂದು ಅಶ್ವತ್ಥ್  ನಾರಾಯಣ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next