Advertisement
ಉಡುಪಿ. ದಕ್ಷಿಣಕನ್ನಡ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಸಿನಿಮಾ ಹಾಲ್ ,ಬಾರ್, ಪಬ್ ಗಳಲ್ಲಿ ಶೇ. 50 ರಷ್ಟು ವೀಕ್ಷಕರಿಗೆ ಮಾತ್ರ ಸಿನಿಮಾ ನೋಡಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಾಗಿ ನೀಡಲಾಗಿರುವ ಮಾರ್ಗಸೂಚಿಯ ಅನ್ವಯ ಎಲ್ಲಾ ರೀತಿಯ ರ್ಯಾಲಿ, ಮುಷ್ಕರ ಹಾಗೂ ಪ್ರತಿಭಟನೆಗಳ ಮೇಲೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.
Related Articles
Advertisement
– ವಿದ್ಯಾಗಮ ಸೇರಿದಂತೆ 6ರಿಂದ 9ನೇ ತರಗತಿಯವರೆಗೆ ಶಾಲೆ ಬಂದ್ ಆಗಲಿದ್ದು ಉಳಿದಂತೆ 10, 11 ಮತ್ತು 12 ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯಲಿದೆ. ಆದರೂ ತರಗತಿಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ.
-ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದು ನಿಷೇಧ ಮುಂದುವರಿಯಲಿದೆ.
-ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗದಿಪಡಿಸಿರುವ ಆಸನದ ವ್ಯವಸ್ಥೆಯನ್ನು ಮೀರುವಂತಿಲ್ಲ.
-ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಹಾಗೂ ದೈಹಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಈಗಾಗಲೇ ಜಾರಿಯಲ್ಲಿರುವ ನಿಯಮಗಳನ್ನು ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು.
-ಕಚೇರಿಗಳು ಹಾಗೂ ಇತರ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸುವ ವ್ಯವಸ್ಥೆಯನ್ನು ಪಾಲಿಸುವುದು.
– ರಾಜ್ಯ ಸರ್ಕಾರದ ಪ್ರಸ್ತುತ ಮಾರ್ಗಸೂಚಿ ಏಪ್ರಿಲ್ 20ರವರೆಗೆ ಅನ್ವಯವಾಗಲಿದೆ.