Advertisement

ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ

01:38 PM Jun 21, 2021 | Team Udayavani |

ಬೆಂಗಳೂರು: ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಕಾರಣ ಉಡುಪಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

Advertisement

ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ:ಇಂದಿನಿಂದ ಸರಕಾರಿ ಬಸ್‌ ಸಂಚಾರ : ದಕ್ಷಿಣ ಕನ್ನಡ, ಮೈಸೂರು ಬಿಟ್ಟು ಉಳಿದೆಡೆ ಆರಂಭ

ಉತ್ತರಕನ್ನಡ, ಬೆಳಗಾವಿ, ಮಂಡ್ಯ,ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಬೆಳಿಗ್ಗೆ 5ರಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಶನಿವಾರ ಮುಖ್ಯಮಂತ್ರಿಗಳು ಅವಕಾಶ ಕಲ್ಪಿಸಿದ್ದರು. ಇದೀಗ ಮತ್ತೆ ಆರು ಜಿಲ್ಲೆಗೆ ಈ ನಿಯಮವನ್ನು ವಿಸ್ತರಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದೊಂದಿಗೆ ಬಸ್‌, ಮೆಟ್ರೋ ಸಂಚಾರ, ಹೋಟೆಲ್‌, ಕ್ಲಬ್‌ಗಳು, ಹೊರಾಂಗಣ ಚಿತ್ರೀಕರಣ, ಹೊರಾಂಗಣ ಕ್ರೀಡೆಗಳು (ವೀಕ್ಷಕರಿಗೆ ಅವಕಾಶ ಇಲ್ಲ), ಲಾಡ್ಜ್ ಗಳು, ರೆಸಾರ್ಟ್‌ಗಳು, ಜಿಮ್‌ಗಳು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಹವಾನಿಯಂತ್ರಣ (ಎಸಿ) ವ್ಯವಸ್ಥೆ ಇಲ್ಲದೆ ಕಾರ್ಯನಿರ್ವಹಿಸತಕ್ಕದ್ದು ಎಂದು ಸೂಚಿಸಲಾಗಿದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next