Advertisement

ಕಾಂಗ್ರೆಸ್‌ನಿಂದ ರಾಜ್ಯ ಸರ್ಕಾರದ ಖಜಾನೆ ಖಾಲಿ

11:57 AM Oct 03, 2017 | Team Udayavani |

ದೇವನಹಳ್ಳಿ: ರಾಜ್ಯದ ಕಾಂಗ್ರೆಸ್‌ ಸರ್ಕಾರ ನಾಲ್ಕೂವರೆ ವರ್ಷಗಳಲ್ಲಿ ಸರ್ಕಾರದ ಖಜಾನೆ ಖಾಲಿ ಮಾಡಿದೆ ಎಂದು ಬಿಜೆಪಿ ರಾಜಾÂಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಲೇವಡಿ ಮಾಡಿದರು. ತಾಲೂಕಿನ ಚಿಕ್ಕಸಣ್ಣೆ ಗೇಟಿನಲ್ಲಿರುವ ಎಸ್‌ಬಿಎಸ್‌ ಕನ್ವೆಷನ್‌ ಹಾಲ್‌ನಲ್ಲಿ ರಾಜ್ಯ ಬಿಜೆಪಿ ವತಿಯಿಂದ ಆಯೋಜಿಸಿದ್ದ ಬಿಜೆಪಿ ವಿಸ್ತಾರಕ್‌ ಪ್ರಶಿಕ್ಷಣ ಕಾರ್ಯಾಗಾರದ ಸಮರೋಪದಲ್ಲಿ ಮಾತನಾಡಿದರು.

Advertisement

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಪ್ರತಿ ಕಾರ್ಯಕರ್ತರು ಕಾಂಗ್ರೆಸ್‌ ಸರ್ಕಾರದಲ್ಲಿ ಅತ್ಯಾಚಾರ, ಮಹಿಳೆಯರ ಮೇಲೆ ದೌರ್ಜನ್ಯ, ಮಕ್ಕಳ ಮೇಲೆ ಹಲ್ಲೆ, ಇತರೆ ವಿಚಾರಗಳನ್ನು ಮನದಟ್ಟು ಮಾಡಬೇಕು. ಪ್ರತಿ ಬೂತ್‌ನಲ್ಲೂ ಮತದಾರರ ಮನಸ್ಸನ್ನು ಬದಲಾಯಿಸಬೇಕು ಎಂದರು.

ಇದು ಪ್ರಧಾನಿ ಯೋಜನೆ: ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಅನ್ನಭಾಗ್ಯ ಯೋಜನೆಯಾಗಿದೆ. ಎಲ್ಲಾ ಪಡಿತರ ಅಂಗಡಿಗಳ ಹತ್ತಿರ ಕೇಂದ್ರ ಸರ್ಕಾರದ ಅನುದಾನವನ್ನು ಮತ್ತು ಮೋದಿಯವರ ಭಾವಚಿತ್ರ ಹಾಕಿಸಬೇಕು ಎಂದರು. ರಾಜ್ಯ ಸರ್ಕಾರ ಜನರ ಹಿತವನ್ನು ಮರೆತಿದೆ. ಕೇಂದ್ರ ಸರ್ಕಾರದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಈಗಾಗಲೇ ರಾಜ್ಯದಲ್ಲಿ ಮೂರು ಸುತ್ತು ಪ್ರವಾಸ ಮಾಡಿದ್ದೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ದೇಶದಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನು ಇಟ್ಟಿದ್ದಾರೆ. 2019ರ ವೇಳೆಗೆ ರಾಷ್ಟ್ರದ ಎಲ್ಲಾ ಮನೆಗಳಿಗೆ ವಿದ್ಯುತ್‌ ಸಂಪರ್ಕ ಉಚಿತವಾಗಿ ನೀಡಲಿದ್ದಾರೆ ಎಂದರು.

ಸಾಲ ಮನ್ನಾ: ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಸಹಕಾರಿ ಬ್ಯಾಂಕು ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲವನ್ನು ಆಯಾ ರಾಜ್ಯಸರ್ಕಾರಗಳು ರೈತರ ಸಾಲ ಮನ್ನಾ ಮಾಡಿದೆ. ಆದರೆ ಕೇಂದ್ರ ಸರ್ಕಾರ ಒಂದು ರೂಪಾಯಿಯನ್ನೂ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ 50 ಸಾವಿರ ರೂ. ಮನ್ನಾ ಮಾಡಿರುವುದಾಗಿ ಹೇಳಿದ್ದಾ¤ರೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲವನ್ನು ಮನ್ನಾ ಮಾಡಿ ಎಂದು ಹೇಳುತ್ತಾರೆ.

Advertisement

ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ. ಅವರೇ ಸಾಲ ಮನ್ನಾ ಮಾಡಬಹುದು ಎಂದರು. ಕೇಂದ್ರ ಸಚಿವ ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್‌ಜೀ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, ಜಿಲ್ಲಾ ಸಹ ಉಸ್ತುವಾರಿ ಸಚ್ಚಿದಾನಂದ ಮೂರ್ತಿ, ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ಉಪಾಧ್ಯಕ್ಷ ಎಚ್‌.ಎಂ.ರವಿಕುಮಾರ್‌, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಡಿ.ಆರ್‌.ನಾರಾಯಣಸ್ವಾಮಿ,

ರಾಜ್ಯ ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಕೆ.ನಾಗೇಶ್‌, ರಾಷ್ಟ್ರೀಯ ಪರಿಷತ್‌ ಸದಸ್ಯರಾದ ಎ.ಸಿ.ಗುರುಸ್ವಾಮಿ ಹಾಗೂ ದೇ.ಸು.ನಾಗರಾಜ್‌, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎನ್‌.ರಾಜಗೋಪಾಲ್‌, ತಾಲೂಕು ಬಿಜೆಪಿ ಅಧ್ಯಕ್ಷ ಸಿ.ನಾಗರಾಜಗೌಡ, ಜಿಲ್ಲಾ ಸಂಚಾಲಕ ಎಸ್‌.ರಮೇಶ್‌ ಕುಮಾರ್‌, ತಾಲೂಕು ಪ್ರಧಾನ ಕಾರ್ಯದರ್ಶಿ ಸುನೀಲ್‌, ಚನ್ನಕೇಶವ, ಸೊಣ್ಣೇಗೌಡ, ರಾಜ್ಯ ಮುಖಂಡ ಎ.ವಿ.ನಾರಾಯಣಸ್ವಾಮಿ ಮತ್ತಿತರರು ಇದ್ದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ 29 ರೂ. ನೀಡುತ್ತಿದೆ. ರಾಜ್ಯ ಸರ್ಕಾರ ಕೇವಲ 3 ರೂ. ನೀಡಿ, ಅನ್ನಭಾಗ್ಯ ಭಾಗ್ಯ ತಮ್ಮದು ಎಂದು ಹೇಳಿಕೊಳ್ಳುತ್ತಿದೆ.
-ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next