ಬೆಂಗಳೂರು:ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಅವರು ಶುಕ್ರವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯಿ ವಾಲಾ ಅವರು ಪ್ರಮಾಣವಚನ ಬೋಧಿಸಿದರು.
ಪ್ರಮಾಣವಚನ ಸ್ವೀಕಾರದ ಬಳಿಕ ನೂತನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.
ನ್ಯಾ.ದಿನೇಶ್ ಮಹೇಶ್ವರಿ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಬಡ್ತಿ ನೀಡಿದ್ದರಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಇದರಿಂದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನ ತೆರವುಗೊಂಡಿತ್ತು. ಆ ಸ್ಥಾನಕ್ಕೆ ಬಾಂಬೆ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿಯಾಗಿದ್ದ ಓಕಾ ಅವರನ್ನು ಸುಪ್ರೀಂಕೋರ್ಟ್ ಕರ್ನಾಟಕದ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿತ್ತು.