Advertisement

ರಾಜ್ಯದ ತನಿಖಾ ಸಂಸ್ಥೆ ಮೇಲೆ ನಂಬಿಕೆ ಇಲ್ಲ, SIT ತನಿಖೆಗೆ BJP ವಿರೋಧ

09:54 AM Feb 11, 2019 | Team Udayavani |

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ವಾಕ್ಸಮರಕ್ಕೆ ಕಾರಣವಾಗಿದ್ದ ಆಪರೇಷನ್ ಕಮಲದ ಆಡಿಯೋ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಲ್ಲದೇ ಸರ್ಕಾರದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

Advertisement

ತನಿಖೆಗೆ ನಮ್ಮ ಅಭ್ಯಂತರ ಇಲ್ಲ. ಆದರೆ ಎಸಿಬಿ, ಎಸ್ ಐಟಿ ಮೇಲೆ ನಮಗೆ ನಂಬಿಕೆ ಇಲ್ಲ. ಎಲ್ಲಾ ತನಿಖಾ ಸಂಸ್ಥೆಗಳು ಸಿಎಂ ಹಿಡಿತದಲ್ಲಿದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಆಡಿಯೋ ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುವುದನ್ನು ಒಪ್ಪಲು ಸಾಧ್ಯವೇ ಇಲ್ಲ. ಈ ಹಿಂದಿನ ಪ್ರಕರಣಗಳು ಕೂಡಾ ತನಿಖೆಯಾಗಲಿ. ಆಡಿಯೋ ಪ್ರಕರಣದ ಬಗ್ಗೆ ಸದನ ಸಮಿತಿ, ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಆಡಿಯೋ ಸಂಭಾಷಣೆಯ ಸಮಗ್ರ ತನಿಖೆಗೆ ನಮ್ಮ ವಿರೋಧವಿದೆ ಎಂದು ಹೇಳಿದೆ.

ಎಸ್ ಐಟಿ ತನಿಖೆಗೆ ನಮ್ಮ ವಿರೋಧವಿದೆ ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಆರ್.ಅಶೋಕ್ ಸೇರಿದಂತೆ ಎಲ್ಲಾ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶೇಷ ತನಿಖೆಗೆ ಸಹಮತವಿಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next