Advertisement
ಇದಲ್ಲದೆ, ಭಾರೀ ಮಳೆ ಮತ್ತು ಪ್ರವಾಹದಿಂದ ಕೊಚ್ಚಿಹೋಗಿರುವ ಕೊಡಗಿನ ಪುನರ್‌ನಿರ್ಮಾಣವೂ ಕಷ್ಟಸಾಧ್ಯ ಎನ್ನುವಂತಾಗಿದೆ. ಜತೆಗೆ ಮಳೆಯಿಂದ ಹಾನಿಯಾಗಿರುವ ಕರಾವಳಿ ಮತ್ತು ಮಲೆನಾಡಿನ ಬೆಟ್ಟ ಪ್ರದೇಶಗಳಲ್ಲಿಯೂ ಪುನರ್ವಸತಿ ಸೌಲಭ್ಯ ಕಲ್ಪಿಸಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
Related Articles
Advertisement
ಕೊಡಗು ಮರು ನಿರ್ಮಾಣಕ್ಕೆ ಅಡ್ಡಿ:ಕಸ್ತೂರಿರಂಗನ್ ವರದಿಯಲ್ಲಿ ನಿಗದಿಪಡಿಸಿರುವ ಪರಿಸರ ಸೂಕ್ಷ್ಮ ವಲಯವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು ಎಂದು ಹಸಿರು ನ್ಯಾಯಾಧಿಕರಣ ಸ್ಪಷ್ಟ ನಿರ್ದೇಶನ ನೀಡಿದೆ. ಕೊಡಗಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಅನೇಕ ಪ್ರದೇಶಗಳು ಪಶ್ಚಿಮಘಟ್ಟ ವ್ಯಾಪ್ತಿಗೆ ಬರುತ್ತಿರುವುದರಿಂದ ಕೊಚ್ಚಿಹೋಗಿರುವ ಮನೆಗಳ ನಿರ್ಮಾಣ, ಕಾಫಿ ತೋಟ ಸೇರಿದಂತೆ ಬೆಟ್ಟ ಪ್ರದೇಶಗಳಲ್ಲಿ ನಾಶವಾಗಿರುವ ಕೃಷಿ ಭೂಮಿಯನ್ನೂ ಅಭಿವೃದ್ಧಿಪಡಿಸಲು ಅವಕಾಶವಿಲ್ಲ. ಇದು ರಾಜ್ಯದ ಪಾಲಿಗೆ ಆತಂಕವನ್ನು ತಂದೊಡ್ಡಿದೆ. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲೂ ಇದೆ
ಕಸ್ತೂರಿರಂಗನ್ ವರದಿ ಜಾರಿ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲೂ ವಿಚಾರಣೆ ಹಂತದಲ್ಲಿದೆ. ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿಚಾರವೂ ಇಲ್ಲಿ ವಿಚಾರಣೆ ನಡೆಯುತ್ತಿದ್ದು, ರಾಜ್ಯಗಳ ಅಭಿಪ್ರಾಯ ಪಡೆದು ಅಂತಿಮ ಅಧಿಸೂಚನೆ ಹೊರಡಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಹಸಿರು ನ್ಯಾಯಾಧಿಕಣದ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಗಮನಕ್ಕೆ ತರಲು ಕೇಂದ್ರ ಸರ್ಕಾರಕ್ಕೆ ಅವಕಾಶವಿದೆ. ಹೀಗಾಗಿ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತಂತೆ ಕೇಂದ್ರ ಸರ್ಕಾರ ಯಾವ ನಿಲುವು ತೆಗೆದುಕೊಳ್ಳುತ್ತದೆ ಎಂಬುದನ್ನು ಗಮನಿಸಿ ರಾಜ್ಯ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಹೇಳುತ್ತಾರೆ. ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಬರುವ ಜಿಲ್ಲೆಗಳು ಮತ್ತು ಗ್ರಾಮಗಳು
ಉತ್ತರ ಕನ್ನಡ 607
ಶಿವಮೊಗ್ಗ 470
ಚಿಕ್ಕಮಗಳೂರು 143
ಬೆಳಗಾವಿ 72
ಮೈಸೂರು 56
ಕೊಡಗು 55
ದಕ್ಷಿಣ ಕನ್ನಡ 48
ಉಡುಪಿ 40
ಹಾಸನ 38
ಚಾಮರಾಜನಗರ 24