Advertisement

ಶಿಕ್ಷಣ ನೀತಿ ಅಳವಡಿಕೆಯಲ್ಲಿ ರಾಜ್ಯವೇ ಮೊದಲು

03:39 PM Sep 11, 2021 | Team Udayavani |

ಬೀದರ: ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯಾಣದಲ್ಲಿ ಶಿಕ್ಷಕರು ಪ್ರವರ್ತಕರಾಗಿ ಕಾರ್ಯನಿರ್ವಹಿಸಬೇಕಾಗಿದೆ. ಹಾಗಾಗಿ ಶಿಕ್ಷಕರು ಬಹಳಷ್ಟು ಹೊಸ ವಿಷಯಗಳನ್ನು ಕಲಿಯಬೇಕಾಗಿದೆ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಹಣಮಂತಪ್ಪ ಬಿ. ಸೇಡಂಕರ ಹೇಳಿದರು.

Advertisement

ನಗರದ ಬಿವ್ಹಿಬಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ -2020 ಕುರಿತಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಹಿಂದಿನ 10+2+3 ವ್ಯವಸ್ಥೆ ಬದಲಾವಣೆ ಮಾಡಿ 5+3+3+4 ವ್ಯವಸ್ಥೆ ತರುವ ಮೂಲಕ ಸಮಗ್ರ ಶಿಕ್ಷಣ ವ್ಯವಸ್ಥೆಯೇ ಬದಲಾಗಲಿದೆ. ಇಡೀ ದೇಶದಲ್ಲಿಯೇ ಕರ್ನಾಟಕವು ರಾಷ್ಟ್ರೀಯ ಶಿಕ್ಷಣ ಅಳವಡಿಸಿಕೊಂಡ ಮೊದಲ ರಾಜ್ಯವಾಗಿದೆ ಎಂದರು.

ಉಪ ಪ್ರಾಂಶುಪಾಲ ಡಾ| ಎಸ್‌.ಬಿ. ಗಾಮಾ ಉದ್ಘಾಟಿಸಿ, 21ನೇ ಶತಮಾನದೊಂದಿಗೆ ನಮ್ಮ ವಿದ್ಯಾರ್ಥಿಗಳನ್ನು ಮುಂದೆ ಸಾಗುವಂತೆ ಮಾಡುವ ಮಹತ್ವವನ್ನು ಶಿಕ್ಷಣ ನೀತಿ ಒಳಗೊಂಡಿದೆ. ವಿದ್ಯಾರ್ಥಿಗಳು ವಿಮಶಾìತ್ಮಕ ಚಿಂತನೆ, ಸೃಜನಶೀಲತೆ ಸಹಯೋಗ, ಕೋಡಿಂಗ್‌, ಕೃತಕ ಬುದ್ಧಿಮತ್ತೆ ತಿಳಿದುಕೊಳ್ಳುವ ಜ್ಞಾನ ಹೊಂದುವ ವ್ಯವಸ್ಥೆ ಇಲ್ಲಿದೆ. ವಿದ್ಯಾರ್ಥಿಗಳಿಗೆ ಯಾವುದೇ ವಿಷಯ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ನೀಡುತ್ತದೆ. ಅಲ್ಲದೇ ಮಾತೃಭಾಷೆ ಮತ್ತು ಪ್ರಾದೇಶಿಕ ಭಾಷೆಗೆ ಹೆಚ್ಚಿನ ಗಮನ ನೀಡಲಾಗಿದೆ ಎಂದು ಹೇಳಿದರು.

ಕಾರಣಾಂತರಗಳಿಂದ ಅನೇಕ ವಿದ್ಯಾರ್ಥಿಗಳು ಮಧ್ಯದಲ್ಲಿಯೇ ಶಿಕ್ಷಣ ಬಿಟ್ಟರೆ ಅವರ ಶಿಕ್ಷಣ ಅಲ್ಲಿಗೆ ಕೊನೆಗೊಳ್ಳುತ್ತದೆ. ಆದರೆ, ಈ ಶಿಕ್ಷಣ ನೀತಿಯಲ್ಲಿ ಅವರಿಗೆ ತಮ್ಮ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಪ್ರಮಾಣ ಪತ್ರಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ಪ್ರಾಂಶುಪಾಲ ಡಾ| ವಿ.ಎಂ. ಚೆನ್ನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅನಿಲಕುಮಾರ ಅಣದೂರೆ ಸ್ವಾಗತಿಸಿದರು. ಡಾ| ಮಲ್ಲಿಕಾರ್ಜುನ ಕೋಟೆ ವಂದಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next