Advertisement

ರಾಜ್ಯಾದ್ಯಂತ ತೀವ್ರ ಚಳಿ: ಬೆಳಗಾವಿಯಲ್ಲಿ 9.2 ಡಿಗ್ರಿ

03:45 AM Jan 09, 2017 | Team Udayavani |

ಬೆಂಗಳೂರು: ರಾಜ್ಯದಲ್ಲಿ ಚಳಿ ತೀವ್ರಗೊಂಡಿದೆ. ಭಾನುವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲಿಯೇ ಕನಿಷ್ಠ 9.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ 5 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗಿದೆ. 

Advertisement

ಉಳಿದಂತೆ ವಿಜಯಪುರ, ಬಾಗಲಕೋಟೆ, ಹಾವೇರಿಯಲ್ಲಿ ಕನಿಷ್ಠ ತಾಪಮಾನ 10 ಡಿ.ಸೆ.ದಾಖಲಾಗಿದೆ. ಇದು ಇಲ್ಲಿನ ಸಾಮಾನ್ಯ ತಾಪಮಾನಕ್ಕಿಂತ 5 ಡಿ.ಸೆ.ಕಡಿಮೆಯಾಗಿದೆ. ಕರಾವಳಿಯಲ್ಲಿಯೂ ಚಳಿ ತೀವ್ರಗೊಂಡಿದೆ. ಮಂಗಳೂರಿನಲ್ಲಿ 21 ಡಿ.ಸೆ. ಮತ್ತು ಉಡುಪಿಯಲ್ಲಿ 20 ಡಿ.ಸೆ.ಕನಿಷ್ಠ ತಾಪಮಾನ ದಾಖಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಚಳಿಯ ತೀವ್ರತೆ ಇನ್ನೂ ಹೆಚ್ಚಾಗಿದೆ. 

ಈ ಮಧ್ಯೆ, ಇನ್ನೂ ಮೂರ್‍ನಾಲ್ಕು ದಿನ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ತೀವ್ರ ಚಳಿ ಮುಂದುವರಿಯಲಿದ್ದು, ಉಷ್ಣಾಂತ ಸಾಮಾನ್ಯ ತಾಪಮಾನಕ್ಕಿಂತ 5ರಿಂದ 6 ಡಿಗ್ರಿ ಸೆ.ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next