ಮಂಡ್ಯ: ಬಾಲ್ಯ ವಿವಾಹದಲ್ಲಿ ಕರ್ನಾಟಕ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ
ಪ್ರಾಧಿಕಾರದ ಕಾರ್ಯದರ್ಶಿ ಮನ್ಸೂರ್ ಅಹಮದ್ ಜಮಾನ್ ಆತಂಕ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಗರದ ಪತ್ರ ಕರ್ತರ ಭವನದಲ್ಲಿ ನಡೆದ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಮಾಧ್ಯ ಮದವರಿಗೆ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಈ ಹಿಂದೆ ಬಾಲ್ಯವಿವಾಹದಲ್ಲಿ ಕರ್ನಾಟಕ ಎಂಟನೇ ಸ್ಥಾನ ದಲ್ಲಿತ್ತು. 2017ರಲ್ಲಿ ಮೂರನೇ ಸ್ಥಾನಕ್ಕೆ ಏರಿಕೆಯಾಗಿತ್ತು. ಇದೀಗ ಎರಡನೇ ಸ್ಥಾನದಲ್ಲಿದೆ. ಇದನ್ನು ಮನಗಂಡಿದ್ದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ 2017ನೇ ಏಪ್ರಿಲ್ 26ರಂದು ಬಾಲ್ಯ ವಿವಾಹ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಕಠಿಣ ಕಾನೂನುಗಳನ್ನು ಜಾರಿಗೊಳಿಸಿತ್ತು. ಆದರೂ ಇನ್ನೂ ಕಡಿಮೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆತಂಕದ ಸಂಗತಿ: ಬಾಲ್ಯವಿವಾಹಕ್ಕೆ ಮುಖ್ಯವಾಗಿ ಬಡತನ, ಅನಕ್ಷರತೆ ಕಾರಣ. ಸಮಸ್ಯೆಗಳು ಹಾಗೂ ಜವಾಬ್ದಾರಿ ಕಳೆದುಕೊಳ್ಳುವ ಆತುರಕ್ಕೆ ಬಿದ್ದು ಪ್ರಾಪ್ತ ವಯಸ್ಸಿಗೆ ಮುನ್ನವೇ ಹೆಣ್ಣು ಮಕ್ಕಳಿಗೆ ಪೋಷಕರು ಮದುವೆ ಮಾಡುತ್ತಿದ್ದಾರೆ. ಇದರಿಂದ ಹೆಣ್ಣು ಮಕ್ಕಳಿಗೆ ಸಮಸ್ಯೆಗಳು ಎದುರಾಗಬ ಹುದೆಂಬ ಪರಿವೇ ಅವರಿಗಿದಿರುವುದು ಆತಂಕದ ಸಂಗತಿ. ಇದನ್ನು ದೂರ ಮಾಡಲು ಕಠಿಣ ಕಾನೂನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್ ಕೆರ ಗೋಡು ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ.ಎಸ್.ದಿವಾಕರ್, ಜಿಲ್ಲಾ ನಿರೂಪಣಾಧಿಕಾರಿ ಎಸ್.ರಾಜ ಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈ.ರಾಮಕೃಷ್ಣಯ್ಯ, ಪೀಪಲ್ಸ್ ಲೀಗಲ್ ಫೋರಂ ನಿರ್ದೇಶಕ ಪಿ. ಬಾಬು ರಾಜ್, ಬರ್ಡ್ಸ್ ಸಂಸ್ಥೆಯ ನಿರ್ದೇಶಕ ಮಿಕ್ಕೆರೆ ವೆಂಕಟೇಶ್, ಪತ್ರಕರ್ತರಾದ ಡಿ.ಎಲ್.ಲಿಂಗರಾಜು, ಪ್ರಕಾಶ್ ಸಮಾರಂಭದಲ್ಲಿ ಭಾಗವಹಿಸಿದ್ದರು.