ದಾಂಡೇಲಿ: ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯವಿದೆ. ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ನಂಬಿಕೆಯಿಲ್ಲದ ಬಿಜೆಪಿಯಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಯಾಗದು. ಈ ನಿಟ್ಟಿನಲ್ಲಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ ಅತ್ಯಮೂಲ್ಯವಾದ ಮತವನ್ನು ನೀಡಿ ವಿಧಾನ ಪರಿಷತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕೆಂದು ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರು ಮನವಿ ಮಾಡಿದರು.
ಅವರು ಇಂದು ಸಂಜೆ ನಗರದ ಟೌನಶೀಪಿನಲ್ಲಿರುವ ಕೋಮಾರಪಂತ ಸಮಾಜ ಭವನದಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಉತ್ಸುಕನಾಗಿದ್ದೇನೆ. ಈ ಚುನಾವಣೆಯಲ್ಲಿ ನನಗೊಂದು ಅಮೂಲ್ಯ ಮತ ನೀಡಿ ಸೇವೆಗೆ ಮಹತ್ವದ ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆಯವರು ಭೀಮಣ್ಣ ನಾಯ್ಕ ಅವರನ್ನು ಗೆಲ್ಲಿಸುವುದರ ಮೂಲಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರಗತಿಗೆ ಕಾರಣವಾಗುವುದರ ಜೊತೆಗೆ ಜಿಲ್ಲೆಯ ಅಭಿವೃದ್ಧಿಗೂ ಕಾರಣವಾಗಬೇಕಾಗಿದೆ ಎಂದರು.
ಎಸ್.ಎಲ್.ಘೋಟ್ನೇಕರ ಅವರು ಮಾತನಾಡಿ ಈ ಹಿಂದೆ ಎರಡು ಬಾರಿ ವಿಧಾನ ಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿ, ಈ ಬಾರಿ ಬೀಮಣ್ಣ ನಾಯ್ಕ ಅವರನ್ನು ಅಧಿಕ ಮತಗಳ ಅಂತರದಿಂದ ಆರಿಸುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಕಾಂಗ್ರೆಸ್ ಕಿಸನ್ ಘಟಕದ ರಾಜ್ಯ ಕಾರ್ಯದರ್ಶಿ ಶ್ರೀಪಾದ ಹೆಗಡೆ ಕಡವೆ, ಕಾಂಗ್ರೆಸ್ ವೀಕ್ಷಕರಾದ ಚಂದ್ರಪ್ಪ ಬೇಡರ, ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್, ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ, ಸ್ಥಾಯಿ ಸಮಿತಿ ಅಧ್ಯಕ್ಷ ಮೌಲಾಲಿ ಮುಲ್ಲಾ, ಪಕ್ಷದ ಜಿಲ್ಲಾ ವಕ್ತಾರ ಆರ್.ಪಿ.ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಆರ್.ಹೆಗಡೆ, ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪೂಜಾರ್, ಉಪಾಧ್ಯಕ್ಷ ಕರೀಂ ಅಜ್ರೇಕರ, ಮುಖಂಡ ಬಿ.ಡಿ.ಚೌಗಳೆ ಉಪಸ್ಥಿತರಿದ್ದರು.