ಮಂಗಳೂರು: ಪಂಚ ಗ್ಯಾರಂಟಿಗಳ ಫಲಾನುಭಾವಿಗಳು ಸ್ಥಳೀಯ ಸಂಸ್ಥೆಗಳ ಸದಸ್ಯರಾ ಗಿದ್ದು, ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ಖಚಿತ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಎಂ.ಸಿ. ವೇಣುಗೋಪಾಲ್ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ್ದಾರೆ.
ಅವಿಭಜಿತ ಜಿಲ್ಲೆಯಲ್ಲಿ ಒಟ್ಟು 6,032 ಮಂದಿ ಸ್ಥಳೀಯ ಸಂಸ್ಥೆಗಳ ಮತದಾರರಿದ್ದಾರೆ. ಇವರಲ್ಲಿ ಶೇ. 50ಕ್ಕಿಂತಲೂ ಹೆಚ್ಚು ಮಹಿಳಾ ಮತದಾರರಿದ್ದು ಪಂಚ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ.
ಹೀಗಾಗಿ ಈ ಉಪ ಚುನಾವಣೆಯಲ್ಲಿ ಈ ಫಲಾನುಭವಿಗಳು ಕಾಂಗ್ರೆಸ್ ಕೈಹಿಡಿ ಯುವ ವಿಶ್ವಾಸ ಇದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ಅ. 10 ಮತ್ತು 11ರಂದು ದ.ಕ.ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದು, ಅ. 11ರಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡುವರು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗ ಳಾದ ಜಿ.ಎ. ಬಾವಾ, ಮಮತಾ ಗಟ್ಟಿ, ಆರ್. ಪದ್ಮರಾಜ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.