Advertisement
ಜತೆಗೆ, ಈ ಕುರಿತು ಪ್ರತಿಕ್ರಿಯಿಸಲು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರಕಾರ, ಕೇಂದ್ರ ಸರಕಾರ ಮತ್ತು ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಅಂತಿಮ ವಿಚಾರಣೆಯನ್ನು ಜುಲೈ 2ನೇ ವಾರದಲ್ಲಿ ನಡೆಸುವುದಾಗಿ ತಿಳಿಸಿದೆ.2004ರ ಉತ್ತರ ಪ್ರದೇಶ ಮದ್ರಸಾ ಶಿಕ್ಷಣ ಮಂಡಳಿ ಕಾಯ್ದೆಯು ಅಸಾಂವಿಧಾನಿಕ ಮತ್ತು ಜಾತ್ಯತೀತ ತತ್ವಗಳನ್ನು ಉಲ್ಲಂಘನೆ ಮಾಡುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಇತ್ತೀಚೆಗಷ್ಟೇ ತೀರ್ಪು ನೀಡಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.