Advertisement

ದಿ| ಸುರೇಶ ಅಂಗಡಿ, ಶೆಟ್ಟರ್‌ ಒಂದೇ ನಾಣ್ಯದ ಎರಡು ಮುಖ: ರಮೇಶ ಜಾರಕಿಹೊಳಿ

11:28 PM Apr 07, 2024 | Team Udayavani |

ಗೋಕಾಕ: ದಿ| ಸುರೇಶ ಅಂಗಡಿ ಹಾಗೂ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಒಂದೇ ನಾಣ್ಯದ ಎರಡು ಮುಖಗಳಂತಿದ್ದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

Advertisement

ಗೋಕಾಕದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ್‌ ತಮ್ಮ ಅಧಿಕಾರಾವಧಿಯಲ್ಲಿ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಜಿಲ್ಲೆಗೆ ವಿಶೇಷ ಕೊಡುಗೆ ನೀಡಿದ್ದಾರೆ.

ಕೆಲವರು ಬ್ಯಾಂಕ್‌ ಹಾಗೂ ಸೊಸೈಟಿಗಳ ದುರ್ಬಳಕೆಯಿಂದ ಹಣಬಲ ತೋರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಿಬಿಐ ತನಿಖೆ ಮೂಲಕ ವಾಸ್ತವಿಕತೆಯನ್ನು ಜನರ ಮುಂದಿಡಲಾಗುವುದು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next