ಬೆಂಗಳೂರು: ಮನೆ ಪಾಠಕ್ಕೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿದ್ದ ಆರೋಪಿಯನ್ನು ಜೆ.ಪಿ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕನಕಪುರದ ಅಭಿಷೇಕ್ ಗೌಡ (25) ಬಂಧಿತ. ಈತ ಒಂದೂವರೆ ತಿಂಗಳ ಹಿಂದೆ ವಿದ್ಯಾರ್ಥಿನಿಯನ್ನು ಅಪ ಹರಿಸಿದ್ದ. ಸದ್ಯ ಬಾಲಕಿಯನ್ನು ರಕ್ಷಿಸಿ ಬಾಲಮಂದಿರದಲ್ಲಿ ಇರಿಸಲಾಗಿದೆ.
ಕನಕಪುರದ ದೊಡ್ಡ ಸಾತೇನಹಳ್ಳಿಯ ನಿವಾಸಿ ಅಭಿಷೇಕ್, ಡಿಪ್ಲೊಮಾ ವ್ಯಾಸಂಗ ಮಾಡಿದ್ದ. ಆರೋಪಿಗೆ ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮಗುವಿದೆ. ವೈಯಕ್ತಿಕ ಕಾರಣಗಳಿಂದ ಪತ್ನಿಯಿಂದ ಆರೋಪಿ ದೂರವಾಗಿದ್ದ. ಜೆ.ಪಿ.ನಗರದ ಸಾರಕ್ಕಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ. ಒಂದರಿಂದ ಎಸ್‌ಎಸ್‌ಎಲ್‌ಸಿವರೆಗೆ ಶಾಲಾ ಮಕ್ಕಳಿಗೆ ಮನೆಪಾಠ ಮಾಡುತ್ತಿದ್ದ. ಬಾಲಕಿ ಸಹ ಇವನ ಬಳಿಗೆ ಟ್ಯೂಷನ್ ಹೋಗುತ್ತಿದ್ದಳು ಎಂದು ಪೊಲೀಸರು ಹೇಳಿದರು. ನ. 23ರಂದು ಬಾಲಕಿ ಟ್ಯೂಷನ್‌ಗೆ ತೆರಳಿದ್ದಳು. ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಆರೋಪಿ ಟ್ಯೂಷನ್ ನಡೆಸುತ್ತಿದ್ದ ಸ್ಥಳಕ್ಕೆ ಪೋಷಕರು ಹೋಗಿ ಪರಿಶೀಲಿಸಿದ್ದರು. ಕೊಠಡಿಗೆ ಬೀಗ ಹಾಕಿತ್ತು. ಇದನ್ನು ಕಂಡು ಆತಂಕಗೊಂಡಿದ್ದ ಪೋಷಕರು, ದೂರು ನೀಡಿದ್ದರು. ಬಳಿಕ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದರು.
ಆರೋಪಿ ಪೊಲೀಸರಿಗೆ ಸಿಕ್ಕಿ ಬೀಳಬಾರದು ಎಂಬ ಉದ್ದೇಶದಿಂದ ಘಟನೆ ಬಳಿಕ ಫೋನ್, ಫೋನ್ ಪೇ, ಗೂಗಲ್ ಪೇ, ಎಟಿಎಂ ಸೇರಿದಂತೆ ಯಾವುದೇ ಆನ್‌ಲೈನ್ ವಹಿವಾಟು ನಡೆಸುತ್ತಿರಲಿಲ್ಲ. ಅದರಿಂದ ಕಾರ್ಯಾ ಚರಣೆ ಸ್ವಲ್ಪ ತಡವಾಯಿತು. ಆರೋಪಿ ಬಾಲಕಿಯನ್ನು ಕರೆ ದೊ ಯ್ಯು ವ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿತ್ತು. ಅದನ್ನು ಆಧರಿಸಿಯೇ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ಹೇಳಿದರು.
ಬಾಲಕಿ ಜತೆ ವಿವಾಹ ಆಗಿರುವ ವಿಡಿಯೋ ಮಾಡಿದ್ದ ಆರೋಪಿ:
ಪ್ರಕರಣದ ತನಿಖೆ ವೇಳೆ ಆರೋಪಿ ಮನೆಯನ್ನು ಪರಿಶೀಲನೆ ನಡೆಸಲಾಯಿತು. ಮನೆಯಲ್ಲೇ ಆರೋಪಿ ಮೊಬೈಲ್ ಬಿಟ್ಟು ಹೋಗಿದ್ದ. ಮೊಬೈಲ್ ಜಪ್ತಿ ಮಾಡಿಕೊಂಡು ಪರಿಶೀಲನೆ ನಡೆಸಲಾ ಯಿತು. ಒಂದು ವರ್ಷದಿಂದ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ಹಾಗೂ ಮದುವೆ ಆಗಿರುವ ಬಗ್ಗೆಯೂ ವಿಡಿಯೋ ಮಾಡಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.