ಬೆಂಗಳೂರು: ರಾಜ್ಯದಲ್ಲಿ ಇನ್ನೂ 2-3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಗಳಿದ್ದು, ಮುಂದಿನ 2 ದಿನಗಳಲ್ಲಿ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನಲ್ಲಿ ಮತ್ತೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಜತೆಗೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಕಳೆದ 5 ದಿನಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಪ್ರಸಾದ್ “ಉದಯವಾಣಿ’ಗೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ತಾಸಿಗೆ 30ರಿಂದ 40 ಕಿ.ಮೀ. ಇರುವ ಸಾಧ್ಯತೆಗಳಿವೆ.