Advertisement
ಎ.2ರಿಂದ 5ರವರೆಗೆ ಕರಾವಳಿ ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಶಾಖಾ ಸೂಚ್ಯಂಕ 40ರಿಂದ 50 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಉತ್ತರ ಒಳನಾಡಿನ ಪ್ರದೇಶಗಳಾದ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶಾಖ ಅಲೆಯ ಪರಿಸ್ಥಿತಿ ಹಾಗೆಯೇ ಮುಂದುವರಿಯುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜತೆಗೆ ಸೋಮವಾರ ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 41.2 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
Related Articles
Advertisement
ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ.
ವಾರಾಂತ್ಯದಲ್ಲಿ ಕೆಲವೆಡೆ ಮಳೆ ನಿರೀಕ್ಷೆಎಪ್ರಿಲ್ 6ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆಯೂ ಇದ್ದು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದ ಕೆಲಪ್ರದೇಶಗಳಲ್ಲಿ ಮಳೆ ಬಿದ್ದಿದೆ. ಏ.7ರಂದು ಕರಾವಳಿ ತೀರ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ. ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಆಗುವ ನೀರಿಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.