Advertisement

Upadhyaksha; ಸದ್ದು ಮಾಡುತ್ತಿದೆ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಟ್ರೇಲರ್

11:34 AM Jan 16, 2024 | Team Udayavani |

ಡಿ. ಎನ್‌ ಸಿನಿಮಾಸ್‌’ ಲಾಂಛನದಲ್ಲಿ ಸ್ಮಿತಾ ಉಮಾಪತಿ ನಿರ್ಮಿಸಿರುವ, ಅನಿಲ್‌ ಕುಮಾರ್‌ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಉಪಾಧ್ಯಕ್ಷ’ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶಿವರಾಜಕುಮಾರ್‌ “ಉಪಾಧ್ಯಕ್ಷ’ ಸಿನಿಮಾದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

Advertisement

“ಉಪಾಧ್ಯಕ್ಷ’ ಸಿನಿಮಾ “ಅಧ್ಯಕ್ಷ’ ಸಿನಿಮಾದ ಮುಂದುವರೆದ ಭಾಗ’ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್‌ ಕುಮಾರ್‌, “ಅಧ್ಯಕ್ಷ’ ಸಿನಿಮಾದ ಕಥೆ ಎಲ್ಲಿಗೆ ನಿಂತಿತ್ತೋ, ಅಲ್ಲಿಂದ “ಉಪಾಧ್ಯಕ್ಷ’ ಸಿನಿಮಾದ ಕಥೆ ಆರಂಭವಾಗುತ್ತದೆ. ಇದೊಂದು ಪಕ್ಕಾ ಮನೋರಂಜನಾತ್ಮಕ ಸಿನಿಮಾ. ಮನರಂಜನೆಗೆ ಬೇಕಾದ ಎಲ್ಲ ಅಂಶಗಳೂ “ಉಪಾಧ್ಯಕ್ಷ’ ಸಿನಿಮಾದಲ್ಲಿದೆ’ ಎಂದು ಮಾಹಿತಿ ನೀಡಿದರು.

“ಇಲ್ಲಿಯವರೆಗೆ ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದೇನೆ. ನಾಯಕನಾಗಿ ಇದು ಮೊದಲ ಸಿನಿಮಾ. “ಉಪಾಧ್ಯಕ್ಷ’ ಕುಟುಂಬ ಸಮೇತ ನೋಡಬಹುದಾದ ಸಿನಿಮಾ. ಇದಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದೇನೆ. ಎಲ್ಲರೂ ನೋಡಿ ಸಿನಿಮಾವನ್ನು ಬೆಂಬಲಿಸಿ’ ಎಂದರು ನಾಯಕ ನಟ ಚಿಕ್ಕಣ್ಣ

ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದ ನಟ ರವಿಶಂಕರ್‌, ನಾಯಕಿ ಮಲೈಕಾ, ನಿರ್ಮಾಪಕ ಉಮಾಪತಿ ಸೇರಿದಂತೆ ಅನೇಕ ಕಲಾವಿದರು, ತಂತ್ರಜ್ಞರು “ಉಪಾಧ್ಯಕ್ಷ’ನ ಕುರಿತು ಮಾತನಾಡಿದರು

Advertisement

Udayavani is now on Telegram. Click here to join our channel and stay updated with the latest news.

Next