Advertisement

ಕೋವಿಡ್ 19 ಭೀತಿಯಿಂದ ರೈಲು ಸೇವೆ ಸ್ಥಗಿತಗೊಳಿಸಲ್ಲ:ಸುರೇಶ್‌ ಅಂಗಡಿ

10:19 AM Mar 17, 2020 | sudhir |

ಬೆಳಗಾವಿ: ಕೊರೊನಾ ಸೋಂಕು ಭೀತಿಯಿಂದಾಗಿ ದೇಶದ ಯಾವುದೇ ಕಡೆಗಳಲ್ಲಿಯೂ ರೈಲು ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ತಿಳಿಸಿದರು.

Advertisement

ಪತ್ರಕರ್ತರ ಜತೆ ಮಾತನಾಡಿದ ಅವರು, ಕಲಬುರಗಿ ಸಹಿತ ಯಾವುದೇ ಕಡೆಗಳಲ್ಲೂ ರೈಲು ಸೇವೆ ಸ್ಥಗಿತ ಮಾಡುವುದಿಲ್ಲ. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ. ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಸುರಕ್ಷಿತ ವಾತಾವರಣ ಇದೆ. ಈಗಾಗಲೇ ರೈಲು ನಿಲ್ದಾಣಗಳಲ್ಲಿ ಸ್ವತ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಪ್ರತಿನಿತ್ಯ ರೈಲು ಮತ್ತು ನಿಲ್ದಾಣಗಳ ಸುತ್ತಮುತ್ತ ಸ್ವತ್ಛತೆ ಕಾಪಾಡಿಕೊಳ್ಳಲಾಗುತ್ತಿದೆ. ಕೊರೊನಾ ವೈರಸ್‌ ಬಗ್ಗೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕೇಂದ್ರ ಸರಕಾರ ಅನೇಕ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು. ಯಾವುದೇ ಊಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next