Advertisement

ಖಾಸಗಿ ಶಾಲೆಗಳ ಖಜಾನೆ ತುಂಬಬೇಕೆಂದರೆ ಆಗದು: ಎಚ್‌. ವಿಶ್ವನಾಥ್‌

10:18 PM Nov 26, 2020 | mahesh |

ಮಡಿಕೇರಿ: ರಾಜ್ಯದಲ್ಲಿ ಶಾಲೆಗಳ ಆರಂಭಿಸುವ ವಿಚಾರ ಕುರಿತು ಸರಕಾರವೇ ವಿನಾಕಾರಣ ಗೊಂದಲ ಮಾಡುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಶಾಲೆ ಆರಂಭಿಸಬೇಕೋ ಬೇಡವೋ ಎನ್ನೋದು ಪೋಷಕರು, ಶಿಕ್ಷಕರಿಗೆ ಬಿಟ್ಟ ವಿಚಾರ. ಸರ್ಕಾರ ಸುಮ್ಮನೆ ಯಾರೋ ಅಧಿಕಾರಿಗಳನ್ನು ಕೂರಿಸಿಕೊಂಡು ಸಭೆ ಮಾಡಿದರೆ ಆಗಲ್ಲ ಎಂದು ಹೇಳಿದರು.

ಖಾಸಗಿ ಶಾಲೆಗಳು ಶುಲ್ಕ ಪಡೆಯಲು ಒತ್ತಾಯ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿ, ಖಾಸಗಿ ಶಾಲೆಗಳು ಸರ್ಕಾರ ಅಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಅಧೀನದಲ್ಲಿದೆ. ಅವರನ್ನು ಸ್ವಲ್ಪ ಹದ್ದುಬಸ್ತಿನಲ್ಲಿಡಬೇಕು, ಎಲ್ಲಾ ಸಂದರ್ಭದಲ್ಲಿ ಅವರ ಖಜಾನೆ ತುಂಬಬೇಕೆಂದರೆ ಆಗಲ್ಲ ಎಂದು ಅಸಮಾಧಾನ ಹೊರಹಾಕಿದರು.

ರಾಜ್ಯ ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಆಕಾಂಕ್ಷಿಗಳ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್‌, ಯಾರಿಗೆ ಸಚಿವ ಸ್ಥಾನ ಸಿಗಬೇಕು ಎನ್ನೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾವ್ಯಾರು ಸಚಿವ ಸ್ಥಾನ ಬೇಕು ಅಂತ ಬಂದವರಲ್ಲ, ರಾಜ್ಯದಲ್ಲಿ ಹೊಸ ಅಲೆಯ ಸರ್ಕಾರ ಬರಬೇಕು ಎನ್ನುವುದಿತ್ತು. ಹೀಗಾಗಿ 17 ಜನರು ಬಂದೆವು, ಅವರಲ್ಲಿ ಕೆಲವರಿಗೆ ಸಚಿವ ಸ್ಥಾನ ಸಿಕ್ಕಿದೆ, ಇನ್ನು ಕೆಲವರು ಆಕಾಂಕ್ಷಿಗಳಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next