Advertisement
ಧರ್ಮಸ್ಥಳದಲ್ಲಿ ಯೋಜನೆಯ ಆಡಳಿತ ಕಚೇರಿ “ಧರ್ಮಶ್ರೀ’ಯ ನೂತನ ವಿಸ್ತೃತ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಾಂಕೇತಿಕವಾಗಿ ಶ್ರದ್ಧಾಕೇಂದ್ರಗಳಿಗೆ ತ್ಯಾಜ್ಯ ಸಂಗ್ರಹಣ ಬುಟ್ಟಿ ವಿತರಿಸಿ ಮಾತನಾಡಿ, ಸರಕಾರದ ಜನಮಂಗಳ ಕಾರ್ಯಗಳಿಗೆ ಹೆಗ್ಗಡೆಯವರೇ ಪ್ರೇರಕ ಶಕ್ತಿಯಾಗಿದ್ದಾರೆ. ಧರ್ಮಸ್ಥಳದ ಮಾದರಿಯಲ್ಲೆ ಎ. 26ರಂದು ರಾಜ್ಯದ 110 ದೇವಸ್ಥಾನಗಳಲ್ಲಿ ಸರಕಾರದ ವತಿಯಿಂದ ಸಾಮೂಹಿಕ ವಿವಾಹ ನಡೆಸಲಾಗುವುದು. ಹೆಗ್ಗಡೆ ದಂಪತಿ ಈ ಕಾರ್ಯಕ್ರಮಕ್ಕೆ ಆಗಮಿಸಿ ಆಶೀರ್ವದಿಸಬೇಕು ಎಂದು ಸಚಿವರು ಅವರನ್ನು ಆಮಂತ್ರಿಸಿದರು. ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ರಾಜ್ಯದೆಲ್ಲೆಡೆ 1,500 ಮಂದಿ ಸೇವಾ ಪ್ರತಿನಿಧಿಗಳು ಸೇವೆ ಮಾಡಿ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ. ಫಲಾನು ಭವಿಗಳೆಲ್ಲ ಪ್ರಗತಿಯ ಹರಿಕಾರರಾಗಿ ಯೋಜನೆಯ ಯಶಸ್ಸಿನ ಪಾಲುದಾರರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Related Articles
Advertisement
ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆ, ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟಿ ಶಿರ್ತಾಡಿ ಸಂಪತ್ ಸಾಮ್ರಾಜ್ಯ ಉಪಸ್ಥಿತರಿದ್ದರು. ಡಾ| ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಯೋಜನಾಧಿಕಾರಿ ಜಯಕರ ಶೆಟ್ಟಿ ವಂದಿಸಿದರು. ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮತ್ತು ಮಮತಾ ರಾವ್ ಕಾರ್ಯಕ್ರಮ ನಿರ್ವಹಿಸಿದರು.
ರಾಷ್ಟ್ರೀಯ ರಕ್ಷಣಾ ನಿಧಿಗೆ 25 ಲಕ್ಷ ರೂ. ದೇಣಿಗೆ. 10 ಸಾವಿರ ಶ್ರದ್ಧಾಕೇಂದ್ರಗಳಿಗೆ 20 ಸಾವಿರ ತ್ಯಾಜ್ಯ ಸಂಗ್ರಹಣಾ ಬುಟ್ಟಿ ವಿತರಣೆ.
ಜನಮಂಗಳ ಕಾರ್ಯಕ್ರಮದಡಿ 1,415 ಮಂದಿ ವಿಶೇಷ ಚೇತನರಿಗೆ ಸಲಕರಣೆ ವಿತರಣೆ.