ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದರು.
ರವಿವಾರ ಜಿ.ಪಂ. ಸಭಾಂಗಣದಲ್ಲಿ ಪರ್ಯಾಯ ಕುರಿತು ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭಕ್ತರು ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆದಿರಬೇಕು, ಮಾಸ್ಕ್ ಸಹಿತ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಚ್ಚರ ವಹಿಸಬೇಕು ಎಂದರು.
ಸುಗಮ ಸಂಚಾರ, ವಾಹನ ನಿಲುಗಡೆ
ವಿವಿಧ ಕಡೆಗಳಿಂದ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ, ಸುಗಮ ಸಂಚಾರ, ವಾಹನ ನಿಲುಗಡೆ ಸಹಿತ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯದ ಮೂಲ ಸೌಕರ್ಯಕ್ಕಾಗಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಜ. 10ರೊಳಗೆ ರಸ್ತೆ ಕಾಮಗಾರಿ
ನಗರಸಭೆ ವ್ಯಾಪ್ತಿಯಲ್ಲಿಸ್ವಚ್ಛತಾ ಕಾರ್ಯ ಕೈಗೊಳ್ಳಲು ಅಗತ್ಯವಿರುವ ಹೆಚ್ಚುವರಿ ಸಿಬಂದಿ ಹಾಗೂ ತ್ಯಾಜ್ಯ ವಿಲೇ ವಾರಿ ವಾಹನಗಳನ್ನು ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು. ನಗರದ ರಸ್ತೆ ನಿರ್ಮಾಣ ಸೇರಿದಂತೆ ದುರಸ್ತಿ ಕಾರ್ಯಗಳನ್ನು ಜ. 10ರೊಳಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.
Related Articles
ಸೂಕ್ತ ಭದ್ರತೆಗೆ ಕ್ರಮ
ಪೊಲೀಸ್ ಇಲಾಖೆಯವರು ವಾಹನ ಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು. ಅವುಗಳ ನಿಲುಗಡೆಗೆ ಸೂಕ್ತ ಸ್ಥಳಗಳನ್ನು ಗುರುತಿಸಿ ವಾಹನ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ಒದಗಿಸ ಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗೆ ಸೂಚನೆ ನೀಡಿದರು.
ಇದನ್ನೂ ಓದಿ:ಮುಂಬೈನಲ್ಲಿ ವಾಟರ್ ಟ್ಯಾಕ್ಸಿಗೆ ಸದ್ಯದಲ್ಲೇ ಚಾಲನೆ
ಟ್ಯಾಬ್ಲೋ ಸಿದ್ಧತೆಗೆ ಸೂಚನೆ
ಪರ್ಯಾಯ ಮೆರವಣಿಗೆಯಲ್ಲಿ ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಟ್ಯಾಬ್ಲೋ ಗಳನ್ನು ಇಲಾಖೆಗಳು ಸಿದ್ಧ ಪಡಿಸ ಬೇಕು. ರಾಜ್ಯ, ಹೊರ ರಾಜ್ಯದ ಸಾಂಸ್ಕೃತಿಕ ಕಲಾತಂಡಗಳ ಮೂಲಕ ಸಾಂಸ್ಕೃತಿಕಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಲಸಿಕಾ ಕೇಂದ್ರಗಳು
ಆರೋಗ್ಯ ಇಲಾಖೆ ವತಿಯಿಂದ ನಿಗದಿತ ಸ್ಥಳಗಳಲ್ಲಿ ಕೋವಿಡ್ ಲಸಿಕೆಗಳನ್ನು ನೀಡಲು ಲಸಿಕಾ ಕೇಂದ್ರಗಳನ್ನು ತೆರೆಯಬೇಕು, ಹೆಚ್ಚಿನ ಕೋವಿಡ್ ತಪಾ ಸಣೆಯನ್ನು ನಡೆಸಬೇಕು. ಆ್ಯಂಬು ಲೆನ್ಸ್ ಸೇರಿದಂತೆ ಅಗ್ನಿ ಅವಘಡಗಳು ನಡೆದಲ್ಲಿ ತತ್‌ಕ್ಷಣ ಸ್ಪಂದಿಸಲು ಸನ್ನದ್ಧ ರಾಗಿರಬೇಕೆಂದು ಸೂಚನೆ ನೀಡಿದರು.
ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃಧಿª ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಡಿಸಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಒ ಡಾ| ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಸ್ವಾಗತ ಸಮಿತಿ ಪದಾಧಿಕಾರಿಗಳಾದ ಯು.ಕೆ. ರಾಘವೇಂದ್ರ ರಾವ್, ಪ್ರೊ| ಶ್ರೀಶ ಆಚಾರ್ಯ, ವಿಷ್ಣು ಪ್ರಸಾದ ಪಾಡಿಗಾರ್, ಪ್ರದೀಪ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಪರ್ಯಾಯಕ್ಕೆ ಸಿಎಂ ಬೊಮ್ಮಾಯಿ
ಪರ್ಯಾಯೋತ್ಸವ ಜ. 18ರಂದು ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಲಿದ್ದಾರೆ. ಅವರು ಜ. 17ರಂದು ಉಡುಪಿಗೆ ಆಗಮಿಸುವರು ಎಂದು ಸಮಿತಿ ಕಾರ್ಯಾಧ್ಯಕ್ಷ ಶಾಸಕ ಕೆ.ರಘುಪತಿ ಭಟ್ ಅವರು ತಿಳಿಸಿದ್ದಾರೆ. ಪರ್ಯಾಯ ಸಂಚಾರದಲ್ಲಿರುವ ಸ್ವಾಮೀಜಿಯವರ ಪುರಪ್ರವೇಶ ಜ. 10ರಂದು ನಡೆಯಲಿದೆ.