Advertisement

ಹೊನಗುಂಟಾ ಗ್ರಾಮಕ್ಕೆ ರಸ್ತೆ ನಿರ್ಮಿಸಲು ಆಗ್ರಹ

11:48 AM Jan 01, 2022 | Team Udayavani |

ಶಹಾಬಾದ: ತಾಲೂಕಿನಿಂದ ಹೊನಗುಂಟಾ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ನಿರ್ಮಿಸಬೇಕು ಎಂದು ಆಗ್ರಹಿಸಿ ಎಐಡಿವೈಒ ಯುವಜನ ಸಂಘಟನೆ ಹಾಗೂ ರೈತ ಕೃಷಿ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ, ಉಪ ತಹಶೀಲ್ದಾರ್‌ ಗುರುರಾಜ ಸಂಗಾವಿಗೆ ಮನವಿ ಸಲ್ಲಿಸಲಾಯಿತು.

Advertisement

ಹೊನಗುಂಟಾ ಹಾಗೂ ವಡ್ಡರ ವಾಡಿ ಗ್ರಾಮಗಳಿಂದ ದಿನನಿತ್ಯ ಶಹಾಬಾದ ನಗರಕ್ಕೆ ನೂರಾರು ಸಂಖ್ಯೆಯಲ್ಲಿ ಸಾರ್ವಾಜನಿಕರು, ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಾರೆ. ಆದರೆ ರಸ್ತೆಯು ಸಂಪೂರ್ಣ ಹದಗೆಟ್ಟಿರುವುದರಿಂದ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಹದಗೆಟ್ಟ ರಸ್ತೆಗಳಲ್ಲಿ ವಾಹನ ಮುಂದೆ ಹೋದಾಗ ಧೂಳಿನಿಂದ ಬಹಳಷ್ಟು ತೊಂದರೆ ಅನುಭವಿಸಬೇಕಾಗಿದೆ. ಪ್ರಯಾಣಿಕರಿಗೆ ತೊಂದರೆ ಅಗುತ್ತಿರುವುದಲ್ಲದೇ ಅಪಘಾತಗಳು ಹೆಚ್ಚು ಆಗುತ್ತಿವೆ. ಹೀಗಾಗಿ ಕೂಡಲೇ ಗುಣಮಟ್ಟದ ರಸ್ತೆ ನಿರ್ಮಿಸಬೇಕು. ಹೊನಗುಂಟಾ ಹಾಗೂ ವಡ್ಡರ ವಾಡಿ ಗ್ರಾಮಗಳಲ್ಲಿ ಶೌಚಾಲಯಗಳ ಸಮಸ್ಯೆಯಿದ್ದು, ಕೂಡಲೇ ಶೌಚಾಲಯ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಜಿಲ್ಲಾ ಉಪಾದ್ಯಾಕ್ಷರಾದ ಸಿದ್ಧು ಚೌದ್ರಿ ಮಾತನಾಡಿ, ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಜನಪರವಾದ ಯೋಜನೆಗಳನ್ನು ತರದೇ, ಸಮಸ್ಯೆಗಳನ್ನು ಬಗೆಹರಿಸದೇ ಕಾಲಹರಣ ಮಾಡುತ್ತಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವುದು ಸರಕಾರದ ಕರ್ತವ್ಯ. ಆದರೆ ಇವೆಲ್ಲವನ್ನೂ ಸರಕಾರ ಮರೆತು ಹೋಗಿದೆ. ಕೂಡಲೇ ಹೊಸ ರಸ್ತೆ ನಿರ್ಮಾಣ ಮಾಡುವುದರ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಕಾರ್ಯದರ್ಶಿಗಳಾದ ರಮೇಶ ದೇವಕರ್‌, ರಾಜೇಂದ್ರ ಅತನೂರ ಮಾತನಾಡಿದರು. ರಘು ಪವಾರ, ದೇವರಾಜ, ತಿರುಪತಿ, ಶ್ರೀಶೈಲ ಬುರ್ಲಿ, ಮೌನೇಶ ರಾಜವಾಳ, ಸಿದ್ಧು, ಅಂಬ್ರೇಶ ಪ್ರವೀಣ, ತೇಜಶ. ಆರ್‌. ಇಂಬ್ರಾಹಿಮ್‌ಪುರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next