Advertisement
ಭಾರತ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಚೇರಿ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಹರಿಜನವಾಡದ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಸ್ವತ್ಛ ಭಾರತ್ ಮಿಷನ್ (ನಗರ) ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಹಿರ್ದೆಸೆ ಪದ್ಧತಿಯನ್ನು ಸಂಪೂರ್ಣ ನಿಲ್ಲಿಸಬೇಕು. ಕಂಡಕಂಡಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ನಿಲ್ಲಿಸಬೇಕು. ಕೊಳಚೆ ಪ್ರದೇಶಗಳಲ್ಲಿ ಸಾಮೂಹಿಕ ಶೌಚಗೃಹಗಳನ್ನು ನಿರ್ಮಿಸಿದ್ದು, ಅವುಗಳನ್ನು ಬಳಸುವ ಮೂಲಕ ಸ್ವತ್ಛತೆಗೆ ಆದ್ಯತೆ ನೀಡಬೇಕು. ಆ ಮೂಲಕ ನಗರವನ್ನು ಮಾದರಿಯನ್ನಾಗಿಸಬೇಕು ಎಂದರು.ನಗರಸಭೆ ಪೌರಾಯುಕ್ತ ರಮೇಶ ನಾಯಕ ಮಾತನಾಡಿ, ನಗರದ ಸ್ವತ್ಛತೆಗೆ ಜನರ ಸಹಭಾಗಿತ್ವ ಬಹಳ ಮುಖ್ಯ. ಕಸ ಮತ್ತು ತ್ಯಾಜ್ಯ ವಿಲೇವಾರಿ ಮಾಡುವಾಗಲೇ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಬೇಕು. ಇದರಿಂದ ಗೊಬ್ಬರ ತಯಾರಿಕೆಗೆ ಅನುಕೂಲವಾಗಲಿದೆ ಎಂದರು.
ಮೇಲ್ವಿಚಾರಕಿ ಮೂಕಾಂಬಿಕಾ, ಸಿ.ಕೆ.ಸುರೇಶ, ಮುರಳಿಧರ ಕಾರಭಾರಿ, ಸೇವಾದಳ ಜಿಲ್ಲಾ ಸಂಘಟಕ ವಿದ್ಯಾಸಾಗರ ಚಿಣಮಗೇರಿ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಎಚ್.ಪದ್ಮಾ ಇತರರಿದ್ದರು. ನಂತರ ವಿದ್ಯಾರ್ಥಿಗಳಿಂದ ಪ್ರಮುಖ ಬೀದಿಗಳಲ್ಲಿ ಕಲಾ ತಂಡಗಳೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.
Related Articles
ರಾಯಚೂರು: ಜಿಲ್ಲೆಯಲ್ಲಿ 2,54,759 ಮನೆಗಳಿದ್ದು, ಈವರೆಗೆ 2,48,301 ಮನೆಗಳಿಗೆ ಶೌಚಗೃಹ ನಿರ್ಮಿಸಲಾಗಿದೆ. ಇನ್ನೂ 6,458 ಮನೆಗಳಿಗೆ ಮಾತ್ರ ಶೌಚಗೃಹ ನಿರ್ಮಿಸಬೇಕಿದ್ದು, ಮಾಸಾಂತ್ಯಕ್ಕೆ ಅಷ್ಟು ನಿರ್ಮಿಸಿ ಬಯಲು ಶೌಚಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಸ್ವತ್ಛ ಭಾರತ ಮಿಷನ್ ನೋಡಲ್ ಅಧಿಕಾರಿ ಮಹ್ಮದ್ ಯುಸೂಫ್ ತಿಳಿಸಿದರು. ಜಿಪಂ ಕಚೇರಿಯ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಬಾಕಿ ಉಳಿದ ಶೌಚಗೃಹಗಳ ಕಾಮಗಾರಿಯನ್ನು ಅಕ್ಟೋಬರ್ ಅಂತ್ಯದೊಳಗೆ ಮುಗಿಸಲಾಗುವುದು. ನವೆಂಬರ್ 1ರಿಂದ ಜಿಲ್ಲೆ ಬಯಲು ಶೌಚಮುಕ್ತವಾಗಲಿದೆ ಎಂದರು. ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಸೇರಿ ವಿವಿಧ ಇಲಾಖೆ ಅಧಿಕಾರಿಗಳಿದ್ದರು.
Advertisement