Advertisement
ಅವರು ಬಂಟ್ವಾಳ ಎಸ್‌ವಿಎಸ್ ಕಾಲೇಜು ಸಭಾಂಗಣದಲ್ಲಿ ಡಾಣ ಅಮ್ಮೆಂಬಳ ಬಾಳಪ್ಪ ಸೇವಾ ಪ್ರತಿಷ್ಠಾನ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಜಂಟಿ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಾರ ಡಾಣ ಅಮ್ಮೆಂಬಳ ಬಾಳಪ್ಪ ಅವರ 96ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿದರು.
Related Articles
Advertisement
ಬಂಟ್ವಾಳ ಎಸ್‌ವಿಎಸ್ ಕಾಲೇಜು ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಶುಭ ಹಾರೈಸಿದರು.
ಸಾಮಾಜಿಕ ನ್ಯಾಯ ಕಲ್ಪಿಸಿದವರುಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಿ.ಎಂ. ಕುಲಾಲ್ ಪ್ರಸ್ತಾವನೆ ನೀಡಿ ಡಾ| ಬಾಳಪ್ಪ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ ಬ್ರಿಟಿಷರ ವಿರುದ್ದ ಹೋರಾಡಿ ಜೈಲು ಶಿಕ್ಷೆ ಅನುಭವಿಸಿದವರು. ಕಾರ್ಮಿಕರು, ಕೃಷಿಕರ ಬಗ್ಗೆ ನ್ಯಾಯೋಚಿತ ಹೋರಾಟ ನಡೆಸಿ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಿದವರು ಎಂದು ಹೇಳಿದರು. ಹಿರಿಯ ಸಾಮಾಜಿಕ ನೇತಾರ ಎ. ಸಿ.ಭಂಡಾರಿ, ಸಮಾಜ ಸೇವಾ ಸಹಕಾರಿ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷ ಕೆ. ದಯಾನಂದ ಬೆಳ್ಳೂರು ಉಪಸ್ಥಿತರಿದ್ದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ| ತುಕಾರಾಂ ಪೂಜಾರಿ, ಜಿಲ್ಲಾ ಕಸಾಪ ಗೌ.ಕಾರ್ಯದರ್ಶಿ ಬಿ. ತಮ್ಮಯ್ಯ, ಬಂಟ್ವಾಳ ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ, ದಾಮೋದರ ಬಿ.ಎಂ., ಧರ್ಮಜಾಗರಣ ಪ್ರತಿಷ್ಠಾನ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಸದಸ್ಯ ಪರಮೇಶ್ವರ ಎಂ., ಬಂಟ್ವಾಳ ಸಿಪಿಐ ಕಾರ್ಯದರ್ಶಿ ಶೇಖರ ಬಿ., ಭೂನ್ಯಾಯ ಮಂಡಳಿ ಮಾಜಿ ಸದಸ್ಯ ಮುತ್ತಪ್ಪ ಪೂಜಾರಿ ಮೊದಲಾದವರು ಪಾಲ್ಗೊಂಡಿದ್ದರು.ಬಂಟ್ವಾಳ ತಾ| ಕನ್ನಡ ಭವನ ನಿರ್ಮಾಣ ಸಮಿತಿ ಸಂಚಾಲಕ ಗಂಗಾಧರ ಭಟ್ ಕೊಳಕೆ ಸ್ವಾಗತಿಸಿ, ಟ್ರಸ್ಟ್ ಕಾರ್ಯದರ್ಶಿ ಉಮೇಶ್ ಪಿ. ಕೆ. ವಂದಿಸಿದರು. ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರ್ವಹಿಸಿದರು.