Advertisement

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

11:30 PM May 07, 2024 | Team Udayavani |

ಮೈಸೂರು: ಎಚ್‌.ಡಿ. ರೇವಣ್ಣ ವಿರುದ್ಧದ ಅಪಹರಣ ಪ್ರಕರಣದ ಸಂತ್ರಸ್ತೆ ಹುಣಸೂರಿನ ತೋಟದ ಮನೆಯಲ್ಲಿ ಸಿಕ್ಕಿದ್ದಲ್ಲ. ಒಂದೊಮ್ಮೆ ತೋಟದ ಮನೆಯಲ್ಲಿ ಸಿಕ್ಕಿದ್ದೆಂದು ಸಾಬೀತು ಮಾಡಿದರೆ ನಾನು ಜೆಡಿಎಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಹಾಗೂ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್‌ಡ್ರೈವ್‌ ಪ್ರಕರಣದಲ್ಲಿ ಆರೋಪ ಬಂದಿರುವ ವ್ಯಕ್ತಿ ಮೇಲೆ ಕ್ರಮ ಕೈಗೊಳ್ಳಲಿ. ಆದರೆ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದ ಮೇಲೆ ಸಂತ್ರಸ್ತ ಮಹಿಳೆ ಅಪಹರಣವಾಗಿದ್ದಾರೆ ಎಂದು ದೂರು ದಾಖಲಾಗುತ್ತದೆ. ಇದರಲ್ಲಿ ರಾಜ್ಯ ಸರಕಾರದ ಅಣತಿಯಂತೆ ಎ1, ಎ2 ಆರೋಪಿಗ ಳನ್ನಾಗಿ ಮಾಡಲಾಗಿದೆ ಎಂದು ಆರೋಪಿಸಿದರು.

ಸಂತ್ರಸ್ತೆ ಹುಣಸೂರಿನ ರಾಜ ಗೋಪಾಲ್‌ ಅವರ ತೋಟದಲ್ಲಿ ಇರಲಿಲ್ಲ, ಆಕೆ ಹುಣಸೂರು ನಗರದ ಸಂಬಂಧಿಕರ ಮನೆಯಲ್ಲಿ ತಂಗಿದ್ದರು. ಮಹಿಳೆ ಅಪಹರಣದಲ್ಲಿ ಯಾರು ಭಾಗಿಯಾಗಿದ್ದಾರೆ? ಆಕೆಯ ಪುತ್ರನಿಗೆ ಎಷ್ಟು ಹಣ ಸಂದಾಯವಾಗಿದೆ? ದೂರು ಬರೆದುಕೊಟ್ಟವರು ಯಾರು? ಎಲ್ಲಿ ಬರೆದುಕೊಟ್ಟರು? ಇತ್ಯಾದಿ ಎಲ್ಲದರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಕೆ.ಆರ್‌. ನಗರ ಶಾಸಕರ ಕುಮ್ಮಕ್ಕಿ
ನಿಂದ ಎಚ್‌.ಡಿ.ರೇವಣ್ಣ ಮೇಲೆ ಪ್ರಕರಣ ದಾಖಲಾಗಿದೆ ಎಂಬ ಆರೋಪದ ಬಗೆಗಿನ ಪ್ರಶ್ನೆಗೆ ಪ್ರತಿಕ್ರಿಯಿಸಿ, 2018ರ ಚುನಾವಣೆಯಲ್ಲಿ ಭವಾನಿ ರೇವಣ್ಣ ಹಾಲಿ ಶಾಸಕರಿಗೆ ಸಹಾಯ ಮಾಡಿದ್ದರು. ಆ ಶಾಸಕರೇ ಈ ಆರೋಪಕ್ಕೆ ಉತ್ತರಿಸಲಿ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next