ಮಾಲೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಐದು ವರ್ಷಗಳಲ್ಲಿ ನೀಡಿರುವ ಜನಪರ ಅಡಳಿತದ ಅಲೆ ಮತ್ತು ಜಿಲ್ಲೆಯಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಅವರ ವಿರೋಧದ ಅಲೆ ನಡುವೆ ಬಿಜೆಪಿ ಕಾರ್ಯ ಕರ್ತರು ಹಾಗೂ ಮುಖಂಡರ ಶ್ರಮದಿಂದ ಈ ಬಾರಿ ಗೆಲುವು ನಮ್ಮದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ಬಂದಿದ್ದ ಸಂದರ್ಭದಲ್ಲಿ ಮಾಜಿ ಶಾಸಕ ಎ.ನಾಗರಾಜ್ ಅವರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ನಡೆದಿರುವ ಮತ ದಾನದ ಬಗ್ಗೆ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಲೆ ವ್ಯಾಪಕವಾಗಿದೆ. ಕೇಂದ್ರ ಸರ್ಕಾರದ ಸಾಧನೆಗಳು ಸಾಮಾನ್ಯ ಜನರಿಗೆ ತಲುಪಿದೆ. ಜನಪರ ಯೋಜನೆ ಗಳಿಂದ ಜನತೆ ಆಕರ್ಷಿತರಾಗಿದ್ದು, ನರೇಂದ್ರ ಮೋದಿ ಅವರು 2ನೇ ಬಾರಿಯೂ ಪ್ರಧಾನಿಯಾಗುವುದು ಖಚಿತವಾಗಿದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಅವರು 7 ಬಾರಿ ಗೆಲವು ಪಡೆದು ಒಂದು ಬಾರಿ ಸಚಿವರಾದರೂ ಜಿಲ್ಲೆಗೆ ಯಾವುದೇ ರೀತಿಯ ಕೊಡುಗೆ ನೀಡಿಲ್ಲ ಎಂದು ದೂರಿದರು.
ಸೋತು ಮನೆಗೆ: ಕೇಂದ್ರದಿಂದ ಬರುವ ಅನು ದಾನವನ್ನು ಬಳಕೆ ಮಾಡುವಲ್ಲಿ ಕೆಎಚ್ಎಂ ವಿಫಲ ರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿ ರುವ ಸಂಸದರು ಕುಟುಂಬದ ಸ್ವಾರ್ಥಕ್ಕಾಗಿ ಆಸ್ತಿ ಮಾಡುವುದರಲ್ಲಿ ಕಾಲ ಕಳೆದರು. ಸ್ವಪಕ್ಷೀಯ ಮುಖಂಡರನ್ನು ರಾಜಕೀಯವಾಗಿ ಬೆಳೆಯಲು ಬಿಡದೆ ಕ್ಷೇತ್ರದ ಅಭಿವೃದ್ಧಿಯನ್ನೇ ಮರೆತ್ತಿದ್ದರು. ಅವರ ಪಕ್ಷದವರಿಗೆ ಅವರ ವಿರೋಧಿಗಳಾಗಿದ್ದು, ಇದರಿಂದ ಜನರು ಬೇಸತ್ತು ಕೆ.ಎಚ್.ಮುನಿಯಪ್ಪ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸುತ್ತಾರೆ ಎಂದು ಹೇಳಿದರು.
ಕ್ಷೇತ್ರದ ಎಲ್ಲಾ ತಾಲೂಕುಗಳಲ್ಲಿಯೂ ಜನತೆ ಹಾಗೂ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಪಕ್ಷಾತೀತವಾಗಿ ಬಿಜೆಪಿಗೆ ವ್ಯಾಪಕ ಬೆಂಬಲ ವ್ಯಕ್ತಿಪಡಿಸಿ ಚುನಾವಣೆಯಲ್ಲಿ ಹೆಚ್ಚಿನ ಮತಗಳು ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು ಮುಖಂಡರು ಮೋದಿ ಅವರ ಸಾಧನೆಗಳನ್ನು ಜನರ ಮುಂದೆ ಪ್ರಚಾರ ಮಾಡಿಸುವ ಮೂಲಕ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಶ್ರಮವಹಿಸಿದ್ದಾರೆ. ಪಕ್ಷದ ಅಭ್ಯರ್ಥಿಗೆ ಆಯಾ ಮತಗಟ್ಟೆಗಳಲ್ಲಿ ಹೆಚ್ಚಿನ ಮತಗಳನ್ನು ಹಾಕಿಸಿದ ಕಾರ್ಯರ್ತರು ಮುಖಂಡರನ್ನು ಪಕ್ಷಾತೀತವಾಗಿ ಅಭಿನಂದಿಸುವುದಾಗಿ ತಿಳಿಸಿದರು.
ಸಮಸ್ಯೆ ಬಗೆಹರಿಸುತ್ತೇನೆ: ಮೇ 23ರಂದು ನಡೆಯುವ ಮತ ಎಣಿಕೆಯ ನಂತರ ಕ್ಷೇತ್ರದ ಎಲ್ಲಾ ತಾಲೂಕುಗಳ ಮತಗಟ್ಟೆಗಳ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಮುಖಂಡರನ್ನು ಪರಿಚಯಿಸಿಕೊಂಡು ಅಲ್ಲಿನ ಸಮಸ್ಯೆಗಳ ಬಗ್ಗೆ ಪಟ್ಟಿ ಮಾಡಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಕಡೆಗಣಿಸಿದ್ದಕ್ಕೆ ತರಾಟೆ: ಇದೇ ವೇಳೆಯಲ್ಲಿ ಪಕ್ಷದ ಕೆಲವು ಯುವ ಕಾರ್ಯಕರ್ತರು ತಾಲೂಕಿನ ಕೆಲವು ಮುಖಂಡರು ಚುನಾವಣೆಯ ಮುನ್ನಾ ದಿನದ ರಾತ್ರಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ತಮ್ಮ ಸ್ವಾರ್ಥಕ್ಕಾಗಿ ಚುನಾವಣೆಯನ್ನು ನಡೆಸಿರುವ ಕ್ರಮವನ್ನು ಖಂಡಿಸಿ ಅಭ್ಯರ್ಥಿಯ ಸಮ್ಮುಖದಲ್ಲಿಯೇ ನೇರವಾಗಿ ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ನಾಗರಾಜ್ ಬಿಜೆಪಿ ಜಿಲ್ಲಾ ಸಂಚಾಲಕ ಎಟ್ಟಕೋಡಿ ಕೃಷ್ಣಾರೆಡ್ಡಿ, ಉಪಾಧ್ಯಕ್ಷ ಆರ್.ಪ್ರಭಾಕರ್, ಪುರಸಭಾ ಮಾಜಿ ಅಧ್ಯಕ್ಷ ಸಿ.ಪಿ.ನಾಗರಾಜ್, ಎಂ.ರಾಮಮೂರ್ತಿ, ಮುಖಂಡರಾದ ಬಿ.ಎನ್.ರಾಜಾರಾಂ, ತಬಲ ನಾರಾ ಯಣಪ್ಪ, ಎನ್.ಟಿ.ರಾಜು, ಹನುಮಪ್ಪ, ಭಾವನಹಳ್ಳಿ ಮುರಳಿ, ಮೋಹನ್ ಬಾಬು, ರಾಮಣ್ಣ ಇದ್ದರು