Advertisement
ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಕುರಿತ ಮೈತ್ರಿ ಪರ್ವ ಪುಸ್ತಕ ಬಿಡುಗಡೆ ಮಾಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದೊಮ್ಮೆ ಅಧಿಕಾರದಲ್ಲಿದ್ದಾಗ ಗ್ರಾಮ ವಾಸ್ತವ್ಯ ಮಾಡಿದಾಗ ನೀಡಿದ ಎಷ್ಟು ಭರವಸೆಗಳು ಈಡೇರಿವೆ? ಎಷ್ಟು ಬಾಕಿ ಇವೆ ? ಎನ್ನುವ ವರದಿ ಪಡೆದುಕೊಂಡಿದ್ದೇನೆ’ ಎಂದರು. ಗ್ರಾಮವಾಸ್ತವ್ಯ ಸಂದರ್ಭದಲ್ಲಿ ರೈತರಿಗೆ ನೀರು ನಿರ್ವಹಣೆ ಮಾಡುವ ಕುರಿತು ಪ್ರಾತ್ಯಕ್ಷಿಕೆಗಳನ್ನು ತೋರಿಸಲು ಸಾಕ್ಷ್ಯ ಚಿತ್ರಗಳನ್ನು ನಿರ್ಮಿಸ ಲಾಗಿದ್ದು, ಈ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
Related Articles
Advertisement
ಇಂದು ಚಂಡರಕಿಗೆ ಎಚ್ಡಿಕೆಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್ ತಾಲೂಕಿನ ಚಂಡರಕಿ ಗ್ರಾಮದ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಇಡೀ ಗ್ರಾಮ ಸಿಎಂ ಆಗಮನಕ್ಕಾಗಿ ಕಾಯುತ್ತಿದೆ. ತಮ್ಮ ಮಹತ್ವಾಕಾಂಕ್ಷೆಯ ಕಾರ್ಯಕ್ರಮಕ್ಕೆ ಗುರುವಾರ ರಾತ್ರಿಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿನಿಂದ ಕರ್ನಾಟಕ ಎಕ್‌ಪ್ರಸ್ ರೈಲು ಮೂಲಕ ಯಾದಗಿರಿಗೆ ತೆರಳಿದ್ದಾರೆ. ಗುರುಮಿಠ್ಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ರೈತರು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ರಾತ್ರಿ ಶಾಲಾ ಮಕ್ಕಳು ನಡೆಸಿಕೊಡುವ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಅಲ್ಲೇ ಭೋಜನ ಮಾಡಿ ವಾಸ್ತವ್ಯ ಹೂಡಲಿದ್ದಾರೆ. ರೈಲಿನಲ್ಲಿ ತೆರಳಿದ ಸಿಎಂ: ಗ್ರಾಮ ವಾಸ್ತವ್ಯಕ್ಕಾಗಿ ಗುರುವಾರ ರಾತ್ರಿ ಸಿಎಂ ಕುಮಾರಸ್ವಾಮಿ ಅವರು, ಕರ್ನಾಟಕ ಎಕ್ಸ್‌ಪ್ರಸ್ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಕುಮಾರಸ್ವಾಮಿ ಅವರು ಶುಕ್ರವಾರ ಬೆಳಗ್ಗೆ ಚಂಡರಕಿ ಗ್ರಾಮಕ್ಕೆ ತಲುಪಲಿದ್ದಾರೆ.