Advertisement

ಸಮಸ್ಯೆ ನೀಗಿಸುವಂತೆ ಗ್ರಾಮಸ್ಥರ ಒತ್ತಾಯ

04:53 PM Nov 09, 2019 | Team Udayavani |

ಕನಕಪುರ: ತಾಲೂಕಿನ ಕೋಡಿಹಳ್ಳಿ ಗ್ರಾಪಂ ಅಧ್ಯಕ್ಷ ಸುರೇಶ್‌ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಕುರಿತು ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಚರ್ಚೆ ನಡೆಸಲಾಯಿತು.

Advertisement

ಸಿಬ್ಬಂದಿಯ ನಿರ್ಲಕ್ಷ್ಯ, ಹೂಳು ತುಂಬಿಕೊಂಡಿರುವ ಚರಂಡಿಗಳ ದುರಸ್ಥಿ, ಬೀದಿ ದೀಪಗಳು ಬಸವ ಪುರದಲ್ಲಿ 25 ಕುಟುಂಬಗಳು ವಾಸವಿದ್ದು, ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ನೀರಿನ ಸಮಸ್ಯೆ ಎದುರಾಗುವ ಮುನ್ನ ಕ್ರಮ ಕೈಗೊಳ್ಳಬೇಕು. ಸರ್ಕಾರದ ಅನುದಾನ ವಿಳಂಬವಾಗುತ್ತಿದೆ ಇದರಿಂದ ಬೇರೆ ಕಾಮಗಾರಿ ಕೈಗೊಳ್ಳಲು ಸಮಸ್ಯೆ ಯಾಗುತ್ತಿದೆ. ಸಭೆಗಳು ಚರ್ಚೆಗೆ ಮಾತ್ರ ಸೀಮಿತವಾಗದೆ ಕಾರ್ಯಗತ ವಾಗಬೇಕು ಎಂದು ಸದಸ್ಯರು ಅಧಿಕಾರಿ ಗಳನ್ನು ಒತ್ತಾಯಿಸಿದರು. ಪಿಡಿಒ ಕೃಷ್ಣಮೂರ್ತಿ ಮಾತನಾಡಿ, ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಇಲಾಖೆಯ ಕುಂದು ಕೊರತೆಗಳನ್ನು ಚರ್ಚೆ ಮಾಡಿ. ಸವಲತ್ತುಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಬಗ್ಗೆ ಪರಾಮರ್ಶಿಸುವುದು ಕೆಡಿಪಿ ಸಭೆಯ ಉದ್ದೇಶ. ನೀರು ಗಂಟಿಗಳ ನೇಮಕದ ಬಗ್ಗೆ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಯ ಗಮನಕ್ಕೆ ತರಲಾಗಿದ್ದು, ಡಿ.1ರಿಂದ ಕಾಯಂ ನೀರು ಗಂಟಿಯನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ಸಿಕ್ಕಿದೆ. ಎಂದರು.

ಚರಂಡಿ ಹೂಳು ತೆಗೆಯಲು ಕ್ರಮ ಕೈಗೊಳ್ಳಲಾಗುವುದು. ಸಂಸದರು ನರೇಗಾದಲ್ಲಿ ಬರುವ ಅನುದಾನ ಮತ್ತು ಗ್ರಾಪಂ ಅನುದಾನದಿಂದ ಹಳೆ ಬಸ್‌ ನಿಲ್ದಾಣ ತೆರವುಗೊಳಿಸಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲು ಸೂಚಿಸಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಲೋಕೇಶ್‌ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next