Advertisement

ಭೀಮಾ, ಕಾಗಿಣಾ ನದಿ ದಡದಲ್ಲಿರುವ ಗ್ರಾಮಸ್ಥರು ಕೂಡಲೇ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

04:20 PM Oct 17, 2020 | keerthan |

ಕಲಬುರಗಿ: ಮಹಾರಾಷ್ಟ್ರದ ಉಜನಿ ಹಾಗೂ ವೀರ ಜಲಾಶಯದಿಂದ ಭೀಮಾ ನದಿಗೆ ಮತ್ತೆ ನೀರು ಬಿಡಲಾಗಿದ್ದು, ಪ್ರವಾಹ ಮಟ್ಟ ಹೆಚ್ಚುತ್ತಿದೆ. ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜ್ ನಿಂದ ಶನಿವಾರ ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಮುಂದೆ ಇನ್ನೂ ಹೆಚ್ಚಿನ ನೀರು ಹರಿಬಿಡುವ ಸಾಧ್ಯತೆವಿದ್ದು, ಇದು ಭೀಕರ ಪ್ರವಾಹದ ಮುನ್ಸೂಚನೆಯಾಗಿರುತ್ತದೆ.

Advertisement

ಪ್ರವಾಹ ಹಿನ್ನೆಲೆಯಲ್ಲಿ ಜಿಲ್ಲೆಯ ಭೀಮಾ ಹಾಗೂ ಕಾಗಿಣಾ ನದಿ ದಂಡೆಯ ಗ್ರಾಮಸ್ಥರು ಕೂಡಲೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಮನವಿ ಮಾಡಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವವರ ಸಂರಕ್ಷಣೆಗೆ ಈಗಾಗಲೆ 2 ಎನ್ ಡಿಆರ್ ಎಫ್ ತಂಡಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾರ್ಯೋನ್ಮುಖವಾಗಿದೆ. ಇದಲ್ಲದೆ ಎಸ್ ಡಿಅರ್ಎಫ್, ಪೊಲೀಸ್ ಹಾಗೂ ಅಗ್ನಿಶಾಮಕ ದಳ ತಂಡಗಳು ಕ್ಷೇತ್ರದಲ್ಲಿ 24 ಗಂಟೆ ಕಾಲ ಜನರ ಸಂರಕ್ಷಣೆಗೆ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ:ತಾಯಿಯ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡದ ತಂದೆ: ರಾತ್ರಿಯಿಡಿ ಮನೆಯ ಮುಂದೆ ಶವವಿಟ್ಟು ಕಾದ ಮಗ

ಅದೇ ರೀತಿ ಸೇನೆ ಮತ್ತು ವಾಯುಪಡೆ ತಂಡಗಳು ಜಿಲ್ಲೆಗೆ ಬರಲಿವೆ. ಹೀಗಾಗಿ ಸಾರ್ವಜನಿಕರು ಯಾವುದೇ ಭಯಕ್ಕೆ ಮತ್ತು ಅತಂಕಕ್ಕೆ ಒಳಗಾಗಬಾರದು. ರಕ್ಷಣಾ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ವಿ.ವಿ.ಜ್ಯೋತ್ಸ್ನಾ ಅವರು ಮನವಿ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next