Advertisement
ನಗರದ ಜಿಪಂ ಸಭಾಂಗಣದಲ್ಲಿ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು, ನಂಜನಗೂಡು, ವರುಣಾ, ತಿ.ನರಸೀಪುರ, ಹೆಗ್ಗಡದೇವನ ಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಎಣಿಕೆ ಕಾರ್ಯಕ್ಕೆ ನಿಯೋಜಿತರಾಗಿರುವ ಮತ ಎಣಿಕೆ ಮೇಲ್ವಿಚಾರಕರು, ಸಹಾಯಕರಿಗೆ ಆಯೋಜಿಸಲಾಗಿದ್ದ ಮತ ಎಣಿಕ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
Related Articles
Advertisement
ರಾಜ್ಯ ಮಟ್ಟದ ಚುನಾವಣಾ ಸಂಪನ್ಮೂಲ ವ್ಯಕ್ತಿ ಪ್ರೊ.ಕೃ.ಪ.ಗಣೇಶ್ ಅವರು ಮತ ಎಣಿಕೆ ಕರ್ತವ್ಯದ ವಿವಿಧ ಹಂತಗಳನ್ನು ಪವರ್ ಪಾಯಿಂಟ್ ಮೂಲಕ ಸವಿಸ್ತಾರವಾಗಿ ತಿಳಿಸಿಕೊಟ್ಟರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಉಪವಿಭಾಗಾಧಿಕಾರಿ ನಿಖೀತಾ ಚಿನ್ನಸ್ವಾಮಿ, ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ್ ಉಪಸ್ಥಿತರಿದ್ದರು.
19 ಮೇ ಸಿಎಚ್‌ಎನ್ ಡಿಸಿ ಎಲೆಕ್ಷನ್ ಮೀಟಿಂಗ್: ಚಾಮರಾಜನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಲೋಕಸಭಾ ಚುನಾವಣೆ ಮತ ಎಣಿಕೆಗೆ ನಿಯೋಜಿತರಾಗಿರುವ ಅಧಿಕಾರಿಗಳ ಸಭೆ ನಡೆಸಿದರು.
ಪಟಾಕಿ, ಬಿಡಿ ಪೆಟ್ರೋಲ್‌ಗೆ ನಿಷೇಧ: ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮೇ 23ರಂದು ನಗರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮೇ 23ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಮಧ್ಯರಾತ್ರಿ 12 ಗಂಟೆವರೆಗೆ ಪಟಾಕಿ ಮಾರಾಟ ಹಾಗೂ ಬಿಡಿ ಪೆಟ್ರೋಲ್ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಆದೇಶ ಹೊರಡಿಸಿದ್ದಾರೆ.
ಫಲಿತಾಂಶ ಪ್ರಕಟವಾದ ನಂತರ ವಿಜೇತ ಅಭ್ಯರ್ಥಿ ಪರವಾಗಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸಂಭ್ರಮಾಚರಣೆ ಹೆಸರಿನಲ್ಲಿ ಪಟಾಕಿ ಸಿಡಿಸಿ ಸೋತ ಅಭ್ಯರ್ಥಿಗಳ ಮತ್ತು ಕಾರ್ಯಕರ್ತರನ್ನು ಕೆರಳಿಸುವ ಸಾಧ್ಯತೆಯಿದೆ. ಅಲ್ಲದೇ, ಕಿಡಿಗೇಡಿಗಳು ತಮ್ಮ ಸ್ವಾರ್ಥ ಸಾಧನೆಗೆ ವಿಧ್ವಂಸಕ ಕೃತ್ಯಕ್ಕೆ ನಡೆಸುವುದನ್ನು ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಿಜಯೋತ್ಸವ, ಸಭೆ ನಡೆಸಂಗಿಲ್ಲ: ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ನಂಜನಗೂಡು- ಮೈಸೂರು ರಸ್ತೆಯ ತಾಲೂಕಿನ ಬೇಡರಪುರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 23ರಂದು ನಡೆಯಲಿದೆ.
ಹೀಗಾಗಿ ಮೇ 23ರ ಬೆಳಗ್ಗೆ 6ರಿಂದ ಮೇ 24ರ ಮಧ್ಯರಾತ್ರಿ 12 ರವರೆಗೆ ಜಿಲ್ಲಾದ್ಯಂತ (ಮತ ಎಣಿಕೆ ಕೇಂದ್ರದ ಸಮೀಪ ಮತ ಎಣಿಕೆ ಮುಕ್ತಾಯದವರೆಗೆ ಹೊರತುಪಡಿಸಿ) ಸಿಆರ್‌ಪಿಸಿ 144ರ ಕಲಂ ಅನ್ವಯ ವಿಜಯಿ ಅಭ್ಯರ್ಥಿಗಳ ಬೆಂಬಲಿಗರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮೆರವಣಿಗೆ, ಸಭೆ ಸಮಾರಂಭ, ಪಟಾಕಿ ಸಿಡಿಸುವುದು,
ಗುಂಪುಗೂಡುವುದು, ಉದ್ರೇಕಕಾರಿ ಘೋಷಣೆ ಕೂಗುವುದು, ಸೋತ ಅಭ್ಯರ್ಥಿಗಳ, ಪಕ್ಷಗಳ ಕಾರ್ಯಕರ್ತರನ್ನು ಛೇಡಿಸುವುದು, ವಿಜಯೋತ್ಸವ ಇತ್ಯಾದಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಸ್ಫೋಟಕ ವಸ್ತು, ಮಾರಕಾಸ್ತ್ರ ಒಯ್ಯುವುದು, 5ಕ್ಕಿಂತ ಹೆಚ್ಚಿನ ಜನ ಗುಂಪುಗೂಡುವುದನ್ನೂ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.