Advertisement

ಬಿಎಸ್‌ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರುದಾರೆ ಸಾವು

10:16 PM May 27, 2024 | Team Udayavani |

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ತಮ್ಮ ಅಪ್ರಾಪ್ತ ಪುತ್ರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.

Advertisement

ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ 53 ವರ್ಷದ ಮಹಿಳೆ ಆರೋಗ್ಯದಲ್ಲಿ ಭಾನುವಾರ ಸಂಜೆ ಏರುಪೇರು ಕಂಡುಬಂದಿದೆ. ಕೂಡಲೇ ಮಕ್ಕಳು, ಸಂಬಂಧಿಕರು, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾತ್ರಿ 9.30 ಗಂಟೆ ಸುಮಾರಿಗೆ ಚಿಕಿತ್ಸೆ ಫ‌ಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮಹಿಳೆ ನೀಡಿದ್ದ ದೂರು ಆಧರಿಸಿ ಯಡಿಯೂರಪ್ಪ ವಿರುದ್ಧ ಮಾ.14ರಂದು ಸದಾಶಿವನಗರ ಠಾಣೆ ಪೊಲೀಸರು ಪೋಕೊÕà ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ನಂತರ ತಮಗೆ ಜೀವ ಬೆದರಿಕೆ ಇರುವುದಾಗಿ ದೂರುದಾರ ಮಹಿಳೆ ಆರೋಪಿಸಿದ್ದರು. ಹೀಗಾಗಿ, ಅವರ ಮನೆಗೆ ಪೊಲೀಸ್‌ ಭದ್ರತೆ ನೀಡಲಾಗಿತ್ತು. ಈ ಮಧ್ಯೆ ಮಹಿಳೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಅವರ ಸಾವಿನ ಬಗ್ಗೆ ಮಾಹಿತಿ ಮಾತ್ರ ಸಂಗ್ರಹಿಸಲಾಗಿದೆ. ಮಕ್ಕಳು, ಸಂಬಂಧಿಕರಾಗಲಿ, ಸಾವಿನಲ್ಲಿ ಅನುಮಾನ ವ್ಯಕ್ತಪಡಿಸಿ ಯಾವುದೇ ದೂರು ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಮಹಿಳೆ ಸಾವಿನ ಬಗ್ಗೆ ಪ್ರತಿಕ್ರಿಯೆ ಪಡೆಯಲು ಆಕೆಯ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next