Advertisement

ಜಗತ್ತು ಹಿಂಸೆಯಡೆಗೆ ವಾಲುತ್ತಿದೆ

06:25 AM Dec 29, 2018 | Team Udayavani |

ಬೆಂಗಳೂರು: ಬಸವ ಕೇಂದ್ರದ ವತಿಯಿಂದ ವಿಜಯನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಆಯೋಜಿಸಿರುವ ಮೂರು ದಿನಗಳ “ಶರಣ ಸಂಸ್ಕೃತಿ ಉತ್ಸವ’ಕ್ಕೆ ಶುಕ್ರವಾರ ಡಾ.ಶಿವಮೂರ್ತಿ ಮುರುಘಾ ಶರಣರು ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.

Advertisement

ಈ ವೇಳೆ ಮಾತನಾಡಿದ ಅವರು, ಅಹಿಂಸೆಯಿಂದ ಹಿಂಸೆಯೆಡೆಗೆ ಜಗತ್ತು ವಾಲುತ್ತಿದೆ. ಇದು ಉತ್ತಮ ಬೆಳವಣಿಗೆ ಅಲ್ಲ. ವೈಯಕ್ತಿಕವಾಗಿ, ಕೌಟುಂಬಿಕವಾಗಿ, ಜಾತಿ, ಧರ್ಮ, ದೇವರ ಹೆಸರಲ್ಲಿ ಹಾಗೂ ನೆಪದಲ್ಲಿ ಹಿಂಸೆಗಳು ನಡೆಯುತ್ತಿವೆ. ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ನಡೆದ ವಿಷ ಪ್ರಸಾದ ಘಟನೆ ಮತ್ತೆಂದಿಗೂ ನಡೆಯಬಾರದು ಎಂದರು.

ಬಸವಣ್ಣನವರ ಸಾಮಾಜಿಕ ಕಾಳಜಿ ಕುರಿತು ಇಂದು ಮತ್ತೂಮ್ಮೆ ಚಿಂತನೆ ನಡೆಯಬೇಕಾದ ಅಗತ್ಯವಿದೆ. ಶರಣರ, ವಚನಕಾರರ ಬಸವ ಧರ್ಮ ಅಥವಾ ಲಿಂಗಾಯತ ಧರ್ಮವು ಯಾವುದೇ ಕಾರಣಕ್ಕೂ ಹಿಂಸೆಗೆ, ಪ್ರಚೋದನೆಗೆ ಒಳಗಾಗಬಾರದು ಎಂದು ಸಲಹೆ ನೀಡಿದರು.

ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ, ಮಾಜಿ ಸಚಿವರಾದ ವಿ.ಸೋಮಣ್ಣ, ಎಚ್‌.ಆಂಜನೇಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ.ಸಿದ್ದರಾಮಯ್ಯ, ಬಿಬಿಎಂಪಿ ಸದಸ್ಯ ಉಮೇಶ್‌ ಶೆಟ್ಟಿ, ಸ್ಪರ್ಧಾ ವಿಜೇತ ಸಂಸ್ಥೆಯ ಅಧ್ಯಕ್ಷ ಡಾ.ಕೆ.ಎಂ.ಸುರೇಶ್‌ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಗದಗ-ಡಂಬಳದ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ, ಧಾರವಾಡ ಶ್ರೀ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮತ್ತಿತರರು ಇದ್ದರು.

ಬೆಂಗಳೂರಿನಲ್ಲಿ ನೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಬಸವೇಶ್ವರರ ಪ್ರತಿಮೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಹಾಗೂ ಅಗತ್ಯ ಜಮೀನು ನೀಡುವ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಕಂದಾಯ ಸಚಿವ ದೇಶಪಾಂಡೆ ಅವರಿಗೆ ಮನವಿ ಮಾಡುತ್ತೇನೆ. 
-ಎಚ್‌.ಡಿ.ರೇವಣ್ಣ, ಲೋಕೋಪಯೋಗಿ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next