Advertisement
ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಸಮೀಪ ಬುಧವಾರ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 3 ಕೋಟಿ ವೆಚ್ಚದ ಗಾಂಧಿ ಭವನ ನಿರ್ಮಾಣ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
Related Articles
Advertisement
ಗಾಂಧೀಜಿ ವಿಚಾರಧಾರೆಗಳು ಈ ಭೂಮಿ ಇರುವವರೆಗೂ ಪ್ರಸ್ತುತವಾಗಿರುತ್ತದೆಯೆಂದ ಅವರು, ಆದರೆ ಸತ್ಯ, ನಿಷ್ಠೆ ಆಚರಣೆ ಕಷ್ಠ. ಆದರೆ ಗಾಂಧೀಜಿ ನುಡಿದಂತೆ ನಡೆದರು. ನಡೆದಂತೆ ನುಡಿದರೆಂದ ಶಾಸಕ ಸುಧಾಕರ್, ಚಿಕ್ಕಬಳ್ಳಾಪುರದಲ್ಲಿ ಗಾಂಧಿ ಭವನ ಕಟ್ಟಡದ ನಿರ್ಮಾಣ ಮಾಡುತ್ತಿರುವುದು ಸಂತಸ ತಂದಿದೆ. ಗಾಂಧಿ ಭವನದಲ್ಲಿ ಗಾಂಧೀಜಿಯವರ ಚರಿತ್ರೆ, ಬದುಕು, ಹೋರಾಟಗಳ ಬಗ್ಗೆ ಅನೇಕ ಪುಸ್ತಕಗಳು, ಸಿಡಿಗಳು ಲಭ್ಯರುತ್ತದೆ. ಒಂದೇ ಸೂರಿನಡಿ ಗಾಂಧೀಜಿಯವರ ಚರಿತ್ರೆ, ತ್ಯಾಗ, ಆದರ್ಶಗಳ ಬಗ್ಗೆ ಪ್ರತಿಯೊಬ್ಬರಿಗೆ ತಲುಪಿಸುವ ಉದ್ದೇಶದಿಂದ ಈ ಗಾಂಧಿ ಭವನ ನಿರ್ಮಾಣ ಮಾಡಲಾಗುತ್ತಿದೆ. ವಿಶೇಷವಾಗಿ ಯುವಕರು ಇಲ್ಲಿ ಬಂದು ಅಧ್ಯಯನ ಮಾಡಿ, ಇತಿಹಾಸ ತಿಳಿದುಕೊಂಡಾಗ ಮಾತ್ರ ಉತ್ತಮ ರೀತಿಯಲ್ಲಿ ಸಮಾಜ ನಿರ್ಮಾಣ ಮಾಡಬಹುದು ಹಾಗೂ ಆಲೋಚನೆಗಳಿ ಉತ್ತಮ ಅರ್ಥಸಿಗಲಿದೆ ಎಂದರು.
ಜಿಲ್ಲಾಧಿಕಾರಿ ಅನಿರುದ್ ಶ್ರವಣ್, ಸಿಇಒ ಗುರುದತ್ ಹೆಗಡೆ, ತಾಪಂ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ತಿರುಮಲಪ್ಪ, ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಉಪಭಾಗಾಧಿಕಾರಿ ಬಿ.ಶಿವಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇÍಕಿ ಲಕ್ಮೀ ದೇವಮ್ಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿ ಎಂ.ಜುಂಜಣ್ಣ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಕೃಷ್ಣೆಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.