Advertisement
ನೆಹರೂ ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಲ್ಲಕ್ಕಿ ಯುವತಿ ಮಂಡಳಿ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಜಿಲ್ಲಾ ಯುವ ಸಮಾವೇಶ, ಉತ್ತಮ ಯುವ ಸಂಘ ಪ್ರಶಸ್ತಿ ವಿತರಣೆ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಸಮಾರಂಭ ಯುವ ಸಂಘಗಳ ಸದೃಢ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಪಂ. ಉಪಾಧ್ಯಕ್ಷ ಲೋಕೇಶ್ವರಿ ಗೋಪಾಲ್ ಅವರು, ದೇಶದ ಆಸ್ತಿ ಮತ್ತು ಶಕ್ತಿ ಯುವ ವರ್ಗವೇ ಆಗಿದೆ. ದೇಶಕ್ಕೆ ಅನೇಕ ಮಹನೀಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಿ ಎಂದು ಸಲಹೆ ನೀಡಿದರು.
Related Articles
Advertisement
ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಅವರು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತದ ವತಿಯಿಂದ ಯುವ ವರ್ಗದ ಅಭಿವೃದ್ಧಿಗಾಗಿ ಹೆಚ್ಚಿನ ಕಾರ್ಯಕ್ರಮ ರೂಪಿಸಬೇಕು. ಜತೆಗೆ ಯುವಜನೋತ್ಸವಗಳಿಗೆ ಹೆಚ್ಚಿನ ಅನುದಾನ ಮುಂದಿನ ದಿನಗಳಲ್ಲಿ ನೀಡುವಂತೆ ಜಿ.ಪಂ. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಯುವ ಸಂಘ ಗಳಿಗೆ ಉಚಿತವಾಗಿ ಕ್ರೀಡಾ ಸಾಮಗ್ರಿ ವಿತರಿಸಲಾಯಿತು. ಸೋಮವಾರಪೇಟೆ ತಾಲೂಕಿನ ಹಾರಳ್ಳಿ ಬೀಟಿ ಕಟ್ಟೆಯ ಡಾ| ಬಿ.ಆರ್. ಅಂಬೇಡ್ಕರ್ ಯುವಕ ಸಂಘಕ್ಕೆ ಜಿಲ್ಲಾ ಮಟ್ಟದ ಉತ್ತಮ ಯುವಸಂಘ ಪ್ರಶಸ್ತಿಯನ್ನು ಈ ಸಂದರ್ಭ ನೀಡಿ ಗೌರವಿಸಲಾಯಿತು.
ಫೀ|ಮಾ| ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಡಾ| ಗೀತಾಂಜಲಿ, ನೆಹರೂ ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತರಾದ ಸಂತೋಷ್ ಕುಮಾರ್, ಚರಣ್ ಬಿ.ಜೆ., ಮಿಥುನ್ ಎಂ.ಬಿ, ಲಕ್ಷ್ಮಿ¾àಕಾಂತ್, ಮೇರಿ ಒಲಿವೆರ, ಧನಲಕ್ಷ್ಮೀ, ರಾಜೇಶ್ವರಿ, ಜ್ಯೋತಿ ಸೇರಿದಂತೆ ಇತರರು ಇದ್ದರು.ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಸ್ವಾಗತಿಸಿದರು, ನೆಲ್ಲಕ್ಕಿ ಯುವತಿ ಮಂಡಳಿಯ ಅಧ್ಯಕ್ಷರಾದ ಇಂದುಮತಿ ಪ್ರಾರ್ಥಿಸಿದರು. ಕಲಾವಿದೆ ಮಂಜು ಭಾರ್ಗವಿಯವರು ಸ್ವಾಗತ ನೃತ್ಯ ಪ್ರದರ್ಶಿಸಿದರು. ನೆಹರೂ ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತರಾದ ಚಂದನ್ ವಂದಿಸಿದರು. ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷರಾದ ಹರೀಶ್ ನಿರೂಪಿಸಿದರು.