ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜಿನಲ್ಲಿ ಶುಕ್ರವಾರ ಜರಗಿದ ರಂಗಭೂಮಿ ರಂಗೋತ್ಸವದಲ್ಲಿ 44ನೇ ರಾಜ್ಯಮಟ್ಟದ ನಾಟಕೋತ್ಸವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಬೆಂಗಳೂರು ರಂಗಾಸ್ಥೆ ತಂಡದ “ದ್ರೋಪದಿ ಹೇಳ್ತವ್ಳೆ ತಂಡಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದ್ವಿತೀಯ ಪ್ರಶಸ್ತಿ ಕ್ರೌಂಚಗೀತ ನಾಟಕ ಬೆಂಗಳೂರಿನ ರಂಗರಥ ತಂಡ, ತೃತೀಯ ಬಹುಮಾನ ರಂಗಪಯಣ ಬೆಂಗಳೂರು ತಂಡದ”ಚಂದ್ರಗಿರಿಯ ತೀರದಲ್ಲಿ’ ನಾಟಕ ತಂಡ ಪಡೆದುಕೊಂಡವು.
ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ರಂಗಭೂಮಿ ಉಡುಪಿ ಕಲಾಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಾಹೆ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಮಾತನಾಡಿ, ಸಿನೆಮಾ ಕಲಾವಿದರಿಗಿಂದ ನಾಟಕ ಕಲಾವಿದರು ಎತ್ತರದ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದರು.
ಮಣಿಪಾಲ ಮೀಡಿಯ ನೆಟ್‌ವರ್ಕ್ ಲಿ. ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್ ಯು. ಪೈ, ವಿಶ್ವಸಂಸ್ಕೃತಿ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಬಹ್ರೈನ್ ಕನ್ನಡ ಸಂಘದ ಮಾಜಿ ಅಧ್ಯಕ್ಷ ರಾಜ್‌ಕುಮಾರ್ ಬಹ್ರೈನ್, ರಂಗಭೂಮಿ ಉಪಾಧ್ಯಕ್ಷರಾದ ಭಾಸ್ಕರ್ ರಾವ್ ಕಿದಿಯೂರು, ಎನ್.ಆರ್. ಬಲ್ಲಾಳ್ ಉಪಸ್ಥಿತರಿದ್ದರು.
ರಂಗಭೂಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿ, ಜತೆ ಕಾರ್ಯದರ್ಶಿ ವಿವೇಕಾನಂದ ಎನ್. ಪ್ರಶಸ್ತಿ ವಿಜೇತರ ಪಟ್ಟಿ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ನಿರೂಪಿಸಿದರು.
“ದ್ರೋಪದಿ ಹೇಳ್ತವ್ಳೆ ನಾಟಕ ಪ್ರಸ್ತುತಿಗೊಂಡಿತು.