Advertisement

Prakash Belawadi;ಕನ್ನಡ ಚಿತ್ರರಂಗಕ್ಕಿಂತಲೂ ರಂಗಭೂಮಿ ಚೆನ್ನಾಗಿದೆ: ಪ್ರಕಾಶ್‌ ಬೆಳವಾಡಿ

01:28 PM Sep 02, 2024 | Team Udayavani |

ಸಿಗ್ನಲ್‌ ಮ್ಯಾನ್‌’ ಸಿನಿಮಾದ ಹಾಡುಗಳ ಬಿಡುಗಡೆ ಇತ್ತೀಚೆಗೆ ಮೈಸೂರಿನಲ್ಲಿ ನಡೆಯಿತು. ಮೈಸೂರು ಮಹಾರಾಜರು ಹಾಗೂ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭಕೋರಿದರು.

Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ನಟ ಪ್ರಕಾಶ್‌ ಬೆಳವಾಡಿ, ಇಂದಿನ ಕನ್ನಡ ಚಿತ್ರರಂಗಕ್ಕಿಂತಲೂ ರಂಗಭೂಮಿ ಚೆನ್ನಾಗಿದೆ, ಸುರಕ್ಷಿತವಾಗಿದೆ. ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕ ಚಿತ್ರಮಂದಿರಕ್ಕೆ ಬರುತ್ತಿಲ್ಲ. ಆದರೆ ರಂಗಭೂಮಿಯಲ್ಲಿ ಇಂದಿಗೂ ನಮ್ಮ ಕೆಲಸಕ್ಕೆ ಬೇಕಾದ ಬೆಂಬಲ ಸಿಗುತ್ತಿದೆ. ಚಿತ್ರರಂಗದಲ್ಲೂ ಇಂತಹ ವಾತಾವರಣ ಮತ್ತೆ ಬೇಗ ಬರಲಿ’ ಎಂದರು.

ಕೆ.ಶಿವರುದ್ರಯ್ಯ ಈ ಸಿನಿಮಾದ ನಿರ್ದೇಶಕರು. ನಿರ್ದೇಶಕ ಕೆ.ಶಿವರುದ್ರಯ್ಯ ಮಾತನಾಡುತ್ತಾ, ಇದು ಚಾಲ್ಸ್ ಡಿಕನ್ಸ್‌ ಕಾದಂಬರಿ ಆಧಾರಿತ ಕಥೆ. ಮೊದಲನೇ ಮಹಾಯುದ್ಧದ ಸಂದರ್ಭದಲ್ಲಿ ಮೈಸೂರಿನ ಮಹಾರಾಜರು ಯೂರೋಪಿನ ಸೇನೆಗೆ ಬೆಂಬಲ ನೀಡಿ ಕಳುಹಿಸಿದ ಮೈಸೂರು ಲ್ಯಾನ್ಸರ್‌ ತಂಡ ಹೈಫಾ ಬಂದರು ಗೆದ್ದು ಬಂದದ್ದನ್ನು ನೆನಪಿಸುವ ಒಂದು ಹಾಡನ್ನು ಚಿತ್ರೀಕರಣ ಮಾಡಿದ್ದು ಅದನ್ನು ಮೈಸೂರಿನಲ್ಲೇ ರಾಜವಂಶಸ್ಥರಿಂದ ಬಿಡುಗಡೆ ಮಾಡಿಸುವ ಉದ್ದೇಶ ಹೊಂದಿದ್ದೆವು. ಅದು ಯಶಸ್ವಿಯಾಗಿದೆ. ಅದನ್ನು ರಾಜ ವಂಶಸ್ಥರೇ ಬಿಡುಗಡೆ ಮಾಡಿರುವುದು ಮತ್ತಷ್ಟು ಸಂತೋಷ ಎಂದರು.

ಊಟಿಯ ರೈಲ್ವೆ ಮಾರ್ಗದಲ್ಲಿ ರೈಲ್ವೆ ಸ್ಟೇಷನ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಿದ್ದೇವೆ. ಒಂದು ದಿನಕ್ಕೆ ರೈಲು 8 ಬಾರಿ ಈ ಮಾರ್ಗದಲ್ಲಿ ಬರುತ್ತಿತ್ತು. ಪ್ರತೀ ಬಾರಿ ಕ್ಯಾಮೆರಾ, ಲೈಟ್ಸ್‌ಗಳನ್ನು ಟ್ರ್ಯಾಕ್‌ನಿಂದ ತೆಗೆದು ಪಕ್ಕಕ್ಕೆ ಇಟ್ಟುಕೊಳ್ಳಬೇಕಿತ್ತು. ಮಳೆ, ಚಳಿ ಎನ್ನದೆ ಚಿತ್ರೀಕರಣ ಮಾಡಿದ್ದೇವೆ ಎಂದರು.

ಬಿ.ವಿ.ಗಣೇಶ್‌ ಪ್ರಭು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ರಂಗಭೂಮಿ ನಟ ವೆಂಕಟೇಶ್‌ ಪ್ರಸಾದ್‌, ರಾಜೇಶ್‌ ನಟರಂಗ ಮುಂತಾದವರು ಅಭಿನಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next