Advertisement

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

06:34 PM Dec 27, 2024 | Team Udayavani |

ಹೈದರಾಬಾದ್ : ‘ಪುಷ್ಪ-2’ ನ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದ ಆರೋಪಿಯಾಗಿರುವ ನಟ ಅಲ್ಲು ಅರ್ಜುನ್ ಶುಕ್ರವಾರ( ಡಿ27) ಸ್ಥಳೀಯ ನ್ಯಾಯಾಲಯದ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.

Advertisement

ಆರೋಪಿ ಸಂಖ್ಯೆ 11 ಎಂದು ಹೆಸರಿಸಲಾಗಿರುವ ಅಲ್ಲು ಅರ್ಜುನ್ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದು, ಡಿಸೆಂಬರ್ 30 ರಂದು ವಿಚಾರಣೆಗೆ ಬರಬಹುದು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಡಿ 13 ರಂದು ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್  ಅವರನ್ನು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇಂದು ಕೊನೆಗೊಂಡ 14 ದಿನಗಳ ನ್ಯಾಯಾಂಗ ಬಂಧನದ ಅವಧಿಯ ಕುರಿತಾಗಿ ಮುಂದಿನ ವಿಚಾರಣೆಯ ಭಾಗವಾಗಿ ಅವರು ನ್ಯಾಯಾಲಯದ ಮುಂದೆ ಹಾಜರಾಗಬೇಕಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.

ಡಿಸೆಂಬರ್ 14 ರಂದು ಅಲ್ಲು ಅರ್ಜುನ್ ಅವರನ್ನು ಜೈಲಿಗೆ ಕರೆದೊಯ್ದ ಕೆಲವೇ ಗಂಟೆಗಳಲ್ಲಿ ತೆಲಂಗಾಣ ಹೈಕೋರ್ಟ್ ಅವರಿಗೆ ನಾಲ್ಕು ವಾರಗಳ (ಡಿಸೆಂಬರ್ 13 ರಿಂದ) ಮಧ್ಯಂತರ ಜಾಮೀನು ನೀಡಿತ್ತು, ಮರುದಿನ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next