Advertisement

Theerthahalli: ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಎಸ್. ವಿಶ್ವನಾಥ್ ನಿಧನ

01:08 PM Sep 24, 2023 | Kavyashree |

ತೀರ್ಥಹಳ್ಳಿ: ಹಿರಿಯ ಸಹಕಾರಿ, ಮಾಜಿ ವಿಧಾನ ಪರಿಷತ್ ಸದಸ್ಯ, ರಾಜ್ಯ ಭೂ ಬ್ಯಾಂಕ್ ಮಾಜಿ ಅಧ್ಯಕ್ಷ, ರಾಷ್ಟ್ರೀಯ ಸಹಕಾರಿ ತರಬೇತಿ ಕೇಂದ್ರದ ಅಧ್ಯಕ್ಷ, ತೀರ್ಥಹಳ್ಳಿ ಪುರಂದರ ವೇದಿಕೆ ಸ್ಥಾಪಕ, ಇಫ್ಕೋ ಸಂಸ್ಥೆಯ ನಿರ್ದೇಶಕ, ಕೆನರಾ ಬ್ಯಾಂಕಿನ ಮಾಜಿ ನಿರ್ದೇಶಕ ಬಿ.ಎಸ್ ವಿಶ್ವನಾಥನ್ (90) ಸೆ. 24ರ ಭಾನುವಾರ ಬೆಳಿಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

Advertisement

ವಿಶ್ವನಾಥ್ ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಅನಾರೋಗ್ಯ ಪೀಡಿತರಾಗಿದ್ದರು. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ವಿಶ್ವನಾಥ್ ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲ ಗೌಡರ ವಿರುದ್ದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಜಿತರಾಗಿದ್ದರು. ಅದರೆ ಬಳಿಕ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ತೀರ್ಥಹಳ್ಳಿಯ ಪುರಂದರ ವೇದಿಕೆ ಸ್ಥಾಪಿಸಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.

ಮೃತರು ಪತ್ನಿ ಶಾರದಾ, ಪುತ್ರ ಅವಿನಾಶ್ ಹಾಗೂ ಪುತ್ರಿ ಅರ್ಚನಾ ಅವರನ್ನು ಅಗಲಿದ್ದಾರೆ. ವಿಶ್ವನಾಥ್ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next