Advertisement

Thirthahalli: ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ಕಸ್ಟಡಿಗೆ ಪಡೆದ ತೀರ್ಥಹಳ್ಳಿ ಪೊಲೀಸರು

02:43 PM Mar 04, 2024 | Team Udayavani |

ತೀರ್ಥಹಳ್ಳಿ : ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ತೀರ್ಥಹಳ್ಳಿ ಕೋರ್ಟ್ ಗೆ ಹಾಜರುಪಡಿಸಿದ ನಂತರ ಪೊಲೀಸರು ತಮ್ಮ ಕಸ್ಟಡಿಗೆ ಪಡೆದಿದ್ದಾರೆ.
3/12 ಆಗುಂಬೆ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಮತಿಯನ್ನು ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ಪಡೆಯಲಾಗಿದೆ.

Advertisement

ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು ನಕ್ಸಲ್ ಹೋರಾಟದ ಕೇಸ್ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ನಕ್ಸಲ್ ನಾಯಕ ಬಿ.ಜಿ‌. ಕೃಷ್ಣಮೂರ್ತಿಯನ್ನು ಕಳೆದ ತಿಂಗಳು ಕೋರ್ಟ್‌ ಗೆ ಹಾಜರು ಪಡಿಸಿದ್ದ ಬೆನ್ನಲ್ಲೇ ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ತೀರ್ಥಹಳ್ಳಿ ಪೊಲೀಸರ ವಶಕ್ಕೆ ಪಡೆದು ಕೋರ್ಟ್ ಗೆ ಹಾಜರು ಪಡಿಸಿ ನಂತರ ಕಸ್ಟಡಿಗೆ ಪಡೆದಿದ್ದಾರೆ.

ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿ ಯನ್ನು ಸೋಮವಾರ ಬೆಳಗ್ಗೆ 10.30 ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರು ಪಡಿಸಿದರು. ಹೈ ಸೆಕ್ಯೂರಿಟಿ ಮೂಲಕ‌ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಶಿವಮೊಗ್ಗಕ್ಕೆ ಕರೆತಂದು ನಂತರ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಾಯಿತು. ನಕ್ಸಲ್ ಪ್ರಕರಣದ ಆರೋಪಿಯಾಗಿರುವ ಶ್ರೀಮತಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸಮೀಪದ ತಾರಳ್ಳಿಕೊಡಿಗೆ ಗ್ರಾಮದವರು.

ನಕ್ಸಲ್ ಹೋರಾಟದಲ್ಲಿ ಬಿ.ಜಿ. ಕೃಷ್ಣಮೂರ್ತಿ ಜೊತೆ ಗುರುತಿಸಿಕೊಂಡಿದ್ದ ಶೃಂಗೇರಿಯ ಶ್ರೀಮತಿಯನ್ನು 2023 ನವೆಂಬರ್ 7 ರಂದು ಕೇರಳ ಪೊಲೀಸರು ಅರೆಸ್ಟ್ ಮಾಡಿದ್ದರು. ವಿಚಾರಣೆ ಬಳಿಕ ತ್ರಿಶೂರ್ ಜೈಲಿನಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ: Kumbashi; ವಿಶ್ವಕರ್ಮ ಕರಕುಶಲ ಶಿಲ್ಪ ಕಲಾಕೇಂದ್ರಕ್ಕೆ ಅರುಣ್ ಯೋಗಿರಾಜ್ ಭೇಟಿ

Advertisement
Advertisement

Udayavani is now on Telegram. Click here to join our channel and stay updated with the latest news.

Next