Advertisement

ಸಾಗರ: ಕೆಳದಿ ದೇವಸ್ಥಾನದಲ್ಲಿ ಐದು ಹುಂಡಿಗೆ ಕನ್ನ!

01:40 PM Nov 26, 2022 | Team Udayavani |

ಸಾಗರ: ತಾಲೂಕಿನ ಕೆಳದಿಯ ರಾಮೇಶ್ವರ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ಶುಕ್ರವಾರ ತಡೆರಾತ್ರಿ ನಡೆದಿದೆ.

Advertisement

ಕಳ್ಳರು ಹೆಂಚು ತೆಗೆದು ಒಳ ನುಗ್ಗಿದ್ದು ಐದು ಹುಂಡಿಗಳನ್ನು ಹೊರಗೆ ತೆಗೆದುಕೊಂಡು ಹೋಗಿ, ಒಡೆದು ಹಣ ಕದ್ದೊಯ್ದಿರುವುದು ಕಂಡುಬಂದಿದೆ. ಒಡೆದ ಹುಂಡಿಯನ್ನು ದೇವಸ್ಥಾನದ ಆವರಣದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಶಿರಸಿ: ಆಟ ಆಡುತ್ತಿದ್ದಾಗ ಹಾವು ಕಚ್ಚಿ ಎರಡು ವರ್ಷದ ಮಗು ಮೃತ್ಯು

ಹುಂಡಿಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಹಣ ಇತ್ತು ಎಂದು ಅಂದಾಜಿಸಬಹುದು. ದೇವಸ್ಥಾನದ ಸಿಸಿ ಕ್ಯಾಮೆರಾ ಅಳವಡಿಸದೇ ಇರುವುದು ದೊಡ್ಡ ಲೋಪವಾಗಿದೆ. ಈ ಕುರಿತು ಸ್ಥಳೀಯರು ಹಲವು ಬಾರಿ ಪ್ರಾಚ್ಯವಸ್ತು ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ ಎಂದು ಮಾಹಿತಿಯನ್ನು ದೇವಸ್ಥಾನ ಸಮಿತಿಯ ನಿರ್ದೇಶಕ ಸಂದೀಪ್ ಆರೋಪಿಸಿದರು.

ಸಾಗರ ಗ್ರಾಮಾಂತರ ಪೋಲಿಸ್ ಠಾಣಾ ಪೋಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next