Advertisement
ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದ ಶಮಂತ್ ಎಂಬವರು ದೂರು ನೀಡಿದ್ದಾರೆ.
Related Articles
Advertisement
ವೈದ್ಯರು ಪರೀಕ್ಷಿಸಿ ಲಕ್ಷ್ಮಿದೇವಿ ಮೃತಪಟ್ಟಿರವುದಾಗಿ ತಿಳಿಸಿದ್ದು, ಮೃತದೇಹವನ್ನು ತುರ್ತು ಚಿಕಿತ್ಸಾ ವಿಭಾಗದಿಂದ ಹೊರಗಡೆ ತೆಗೆದುಕೊಂಡು ಬಂದ ಸಮಯ ಲಕ್ಷ್ಮಿದೇವಿಯ ಎರಡು ಕೈಗಳಲ್ಲಿ ಒಂದೊಂದು ಬಳೆಗಳು ಮಾತ್ರ ಇರುವುದು ಕಂಡು ಬಂದಿದೆ. ಈ ಬಗ್ಗೆ ಲಕ್ಷ್ಮಿದೇವಿ ಸೊಸೆ ಅನಿತಾ ಸಿಬ್ಬಂದಿಗಳನ್ನು ವಿಚಾರಿಸಿದಾಗ ನಮಗೆ ಗೊತ್ತಿಲ್ಲವೆಂದು ತಿಳಿಸಿದ್ದಾರೆ.
ಆದ್ದರಿಂದ ಲಕ್ಷ್ಮಿದೇವಿ ಕೈಯಲ್ಲಿದ್ದ ನಾಲ್ಕು ಚಿನ್ನದ ಬಳೆಗಳಲ್ಲಿ ಎರಡು ಚಿನ್ನದ ಬಳೆಗಳನ್ನು ತುರ್ತು ಚಿಕಿತ್ಸಾ ವಿಭಾಗದ ಒಳಗೆ ಯಾರೋ ಕಳವು ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ ಎರಡು ಚಿನ್ನದ ಬಳೆಗಳು ಸುಮಾರು 35 ರಿಂದ 40 ಗ್ರಾಂ ತೂಕವಿರುವುದಾಗಿ ಲಕ್ಷ್ಮಿ ದೇವಿ ಮಗ ಶೇಖರ್ ತಿಳಿಸಿದ್ದಾರೆ.
ಬಳೆಗಳ ಒಟ್ಟು ಬೆಲೆ ಸುಮಾರು 2 ಲಕ್ಷ ರೂ. ಎನ್ನಲಾಗಿದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಆಸ್ಪತ್ರೆಯ ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದಾಗ, ಸಿಸಿ ಕ್ಯಾಮರಾ ಪರಿಶೀಲಿಸಿ, ಕಳವಾದ ಚಿನ್ನದ ಬಳೆಗಳನ್ನು ಪತ್ತೆ ಮಾಡಿಕೊಡಬೇಕಾಗಿ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.
ಈ ಪದೆಕರಣಕ್ಕೆ ಸಂಬಂಧಿಸಿಂತೆ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.