ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆ ಯಲ್ಲೇ ಕಳ್ಳತನ ಮಾಡಿದ್ದ ಕೆಲಸದಾಕೆಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹುಳಿಮಾವು ನಿವಾಸಿ ರುಕ್ಮಿಣಿ (30) ಬಂಧಿತೆ. ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ 123 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಸೋಮವಾರಪೇಟೆ ಮೂಲದ ರುಕ್ಮಿಣಿ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿರುವ ವೈದ್ಯೆಯೊಬ್ಬರ ಮನೆಯಲ್ಲಿ ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದು, ಅದೇ ಮನೆಯಲ್ಲಿ ಉಳಿದು ಕೊಳ್ಳಲು ಕೋಣೆಯೊಂದನ್ನು ನೀಡಲಾ ಗಿತ್ತು. ಅದನ್ನು ದುರ್ಬಳಕೆ ಮಾಡಿಕೊಂಡ ಆರೋಪಿತೆ, ಮಾಲಿಕರು ಇಲ್ಲದಿರುವಾಗ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ದ್ದಳು. ಇತ್ತೀಚೆಗೆ ಮನೆ ಮಾಲೀಕರು ಬೀರು ಪರಿಶೀಲಿಸಿದಾಗ ಚಿನ್ನಾಭರಣ ಕಳ್ಳತನ ವಾಗಿರುವುದು ಗೊತ್ತಾಗಿದೆ. ಕೂಡಲೇ ಪೊಲೀಸ್ ಠಾಣೆಗೆ ಕೆಲಸದಾಕೆ ಮೇಲೆ ಅನುಮಾನಗೊಂಡು ದೂರು ನೀಡಿದ್ದರು. ಬಳಿಕ ಆಕೆಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ, ತಪ್ಪು ಮಾಡಿಲ್ಲ ಎಂದು ಆತ್ಮಹತ್ಯೆ ಯತ್ನದ ಡ್ರಾಮಾ ಮಾಡಿದ್ದಳು.
ಬಳಿಕ ಪೊಲೀಸ್ ಶೈಲಿಯಲ್ಲಿ ತೀವ್ರ ರೀತಿಯಲ್ಲಿ ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾಳೆ. ಬಳಿಕ ಮೈಸೂರು, ಬೆಂಗಳೂರಿನ ವಿವಿಧೆಡೆ ಅಡಮಾನ ಇರಿಸಿದ್ದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ . ಈ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು. ಠಾಣಾಧಿಕಾರಿ ಬಿ.ಜಿ.ಕುಮಾರಸ್ವಾಮಿ ಮತ್ತು ಪಿಎಸ್‌ಐ ಸಂತೋಷ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.