ಬೆಂಗಳೂರು: ಮನೆಯ ಬಾಗಿಲು ಮೀಟಿ ಕಳ್ಳತನ ಮಾಡು ತ್ತಿದ್ದ ಉತ್ತರ ಪ್ರದೇಶ ಮೂಲದ ಕಳ್ಳನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಉಮರಿಯ ನಿವಾಸಿ ಇರ್ಫಾನ್ ಇಸ್ಲಾ ಮುದ್ದೀನ್(38) ಬಂಧಿತ.
ಆರೋಪಿಯಿಂದ 1.36 ಕೋಟಿ ರೂ. ಮೌಲ್ಯದ 1 ಕೆ.ಜಿ 700 ಗ್ರಾಂ ಚಿನ್ನಾ ಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ವೃತ್ತಿಪರ ಕಳ್ಳನಾಗಿರುವ ಇರ್ಫಾನ್ ಇಸ್ಲಾಮುದ್ದೀನ್ ವಿರುದ್ಧ ಬೆಂಗಳೂರು ಸೇರಿ ನೆರೆ ರಾಜ್ಯಗಳಲ್ಲಿ 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತನ ಬಂಧನದಿಂದ ನಗರದಲ್ಲಿ 11 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಬಾಗಿಲು ಮೀಟಿ ಒಳಗೆ ಪ್ರವೇಶಿಸಿ ಬೀರುವಿನಲ್ಲಿಟ್ಟಿದ್ದ ಚಿನ್ನ ಕಳವು ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.