ವಿಜಯಪುರ: ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯದ ಅಂಗಡಿಗಳು ಮುಚ್ಚಿದ್ದು, ವಿಜಯಪುರ ಜಿಲ್ಲೆಯಲ್ಲಿ ಎಂಎಸ್ಐಎಲ್ ಮದ್ಯದ ಅಂಗಡಿ ಕಳ್ಳತನವಾಗಿದೆ.
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಮದ್ಯದ ಮಳಿಗೆಯಲ್ಲಿ ಕಳ್ಳತನ ನಡೆದಿದೆ. ಕಳ್ಳತನ ನಡೆದಿದ್ದರೂ ಎಷ್ಟು ಪ್ರಮಾಣದ ಮದ್ಯ ಕಳ್ಳತನವಾಗಿದೆ ಎಂದು ಅಬಕಾರಿ ಅಧಿಕಾರಿಗಳು ಮಾಹಿತಿ ನೀಡಿಲ್ಲ.
ಸ್ಥಳಕ್ಕೆ ಅಬಕಾರಿ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧವಾಗಿದ್ದು, ಎಲ್ಲೂ ಮದ್ಯ ಸಿಗದ ಕಾರಣ ಮದ್ಯ ವ್ಯಸನಿಗಳು ಸರ್ಕಾರಿ ಒಡೆತನದ ಅಬಕಾರಿ ಮಾರಾಟ ಮಳಿಗೆ ಕಳ್ಳತನಕ್ಕೆ ಇಳಿದಿದ್ದಾರೆ.
ಘಟನೆ ಕುರಿತು ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.